ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿ ನಿಂತಿದ್ದ ಕ್ರೈನ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಾಗರದಲ್ಲಿ ನಡೆದಿದೆ.
ಮೃತನನ್ನು ಸಾಗರದ ಟಿವಿಎಸ್ ಶೋ ರೂಂನ ಕಾರ್ಮಿಕ ವೆಂಕಟೇಶ್ (42) ಎಂದು ಗುರುತಿಸಲಾಗಿದೆ. ಕಾರನ್ನು ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ, ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.