ಶಿವಮೊಗ್ಗ: ಲಾಕ್ಡೌನ್ ಆದೇಶವನ್ನು ಉಲ್ಲಂಘಿಸಿ ನಿನ್ನೆ ರಾತ್ರಿ ಅನವಶ್ಯಕವಾಗಿ ತಿರುಗಾಡುತ್ತಿದ್ದ 11 ವಾಹನ ಸವಾರರ ವಿರುದ್ಧ ಎನ್ಡಿಎಂಎ ಕಾಯ್ದೆಯಡಿ ಪ್ರತ್ಯೇಕ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.
ತುಂಗಾನಗರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ದೊಡ್ಡಪೇಟೆ ಠಾಣೆಯಲ್ಲಿ 5, ಕೋಟೆ ಠಾಣೆಯಲ್ಲಿ 1 (ಕಾರು ಚಾಲಕ), ವಿನೋಬಾ ನಗರ ಠಾಣೆಯಲ್ಲಿ 4 ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.