ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರ ವಿರುದ್ಧ ಜಾತಿನಿಂದನೆ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿರುವುದಾಗಿ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಕೆ.ಸಿ ವಿನಯ್ ರಾಜಾವತ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸ್ಟೆಲ್ ಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆ ಆಗುತ್ತಿಲ್ಲ ಎಂದು ವಿದ್ಯಾರ್ಥಿಗಳಿಂದ ದೂರು ಬಂದ ಹಿನ್ನೆಲೆಯಲ್ಲಿ ಕುಲ ಸಚಿವ ಎಸ್, ಎಸ್, ಪಾಟೀಲ್ ಅವರಿಗೆ ಮನವಿ ಸಲ್ಲಿಸಲು ಹೋದಾಗ ವಿದ್ಯಾರ್ಥಿ ಸಂಘಟನೆಯ ಕೆ.ಸಿ ಪವನ್ ಅವರು ಯಾವ ಜಾತಿ ಎಂದು ಪ್ರಶ್ನಿಸಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ವಿವಿಯ ಎಲ್ಲಾ ವಿದ್ಯಾರ್ಥಿ ಗಳನ್ನು ಒಂದೇ ರೀತಿಯಲ್ಲಿ ನೋಡಬೇಕಾದ ಕುಲಸಚಿವರು ಜಾತಿ ಕೇಳಿ ಬಂಜಾರ ಸಮುದಾಯದ ಕ್ಕೆ ಅವಮಾನಿಸಿದ್ದಾರೆ. ಹಾಗಾಗಿ ಅವರ ಮೇಲೆ ಭದ್ರಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಹೀಗಾಗಿ ಕೂಡಲೇ ಅವರನ್ನು ಕುಲ ಸಚಿವ ಹುದ್ದೆಯಿಂದ ತೆರವು ಗೊಳಿಸಬೇಕು ಹಾಗೂ ಬಂಜಾರ ಸಮುದಾಯದ ಸೇವಾಲಾಲ್ ಜನ್ಮಸ್ಥಳದಲ್ಲಿಯೇ ಕ್ಷಮೆಯಾಚಿಸಬೇಕು, ಇಲ್ಲವಾದರೇ ರಾಜ್ಯಾದ್ಯಂತ ಸಮುದಾಯದ ಧರ್ಮಗುರುಗಳ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.