ETV Bharat / state

ಬಡವರಿಗೆ ಸ್ಪಂದಿಸುವಲ್ಲಿ ಸರ್ಕಾರಗಳು ಸಂಫೂರ್ಣ ವಿಫಲ: ಕಾಂಗ್ರೆಸ್​ ಮುಖಂಡ ಸುಂದ್ರೇಶ್ - Test Kit

ಕೊರೊನಾ ವಿಶೇಷ ಪ್ಯಾಕೇಜ್​ನಲ್ಲಿ ಅನೇಕ ನಿರ್ಬಂಧ ವಿಧಿಸಿರುವುದರಿಂದ ಸೌಲಭ್ಯಗಳು ಎಲ್ಲರಿಗೂ ಸಿಗುತ್ತಿಲ್ಲ. ಅಲ್ಲದೆ, ಕಿಟ್​ಗಳ ಖರೀದಿ ಹೆಸರಲ್ಲಿ ಕೇಂದ್ರದಿಂದ ರಾಜ್ಯದವರೆಗೂ ಅವ್ಯವಹಾರ ನಡೆದಿದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದ್ರೇಶ್​ ಆರೋಪಿಸಿದ್ದಾರೆ.

Central and state governments fail to respond poor employees: sundresh
ಬಡವರಿಗೆ ಸ್ಪಂದಿಸುವಲ್ಲಿ ಸರ್ಕಾರಗಳು ಸಂಫೂರ್ಣ ವಿಫಲ: ಕಾಂಗ್ರೆಸ್​ ಮುಖಂಡ ಸುಂದ್ರೇಶ್
author img

By

Published : May 28, 2020, 9:32 PM IST

ಶಿವಮೊಗ್ಗ: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ವಲಸೆ ಕಾರ್ಮಿಕರು, ರೈತರು, ದಿನಗೂಲಿ ನೌಕರರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್.ಸುಂದ್ರೇಶ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ವರ್ಗಗಳಿಗೆ ಘೋಷಿಸಿರುವ ಅನುದಾನ ಹಂಚಿಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಅನೇಕ ನಿರ್ಬಂಧಗಳನ್ನು ವಿಧಿಸಿರುವುದರಿಂದ ಇದುವರೆಗೆ ಯಾರಿಗೂ ಪರಿಹಾರ ದೊರೆಯದೆ ಘೋಷಣೆ ಕೇವಲ ಘೋಷಣೆಯಾಗಿಯೇ ಉಳಿದಿದೆ. ಈ ಕುರಿತು ಜಿಲ್ಲಾ ಕಾಂಗ್ರೆಸ್​ನಿಂದ ಸರ್ವೆ ಸಹ ಮಾಡಲಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್​ ಮುಖಂಡ ಸುಂದ್ರೇಶ್

‌ಕೊರೊನಾ ವೈರಸ್ ಹರುಡುವಿಕೆ ತಡೆಗಟ್ಟುವಲ್ಲಿ ವಿಫಲವಾಗಿರುವ ಸರ್ಕಾರಗಳು ಈ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಸೋಂಕು ಪರೀಕ್ಷಾ ಕಿಟ್, ಪಿಪಿಇ ಕಿಟ್, ಸ್ಯಾನಿಟೈಸರ್ ಖರೀದಿ ಹೆಸರಿನಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದ ವರೆಗೂ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.

ಅಲ್ಲದೆ ಯಾವುದೇ ಕಾರಣಕ್ಕೂ ಗ್ರಾಮ ಪಂಚಾಯಿತಿ ಸದಸ್ಯರನ್ನು ನಾಮ ನಿರ್ದೇಶನ ಮಾಡದೇ ಚುನಾವಣೆ ಮಾಡಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.