ಶಿವಮೊಗ್ಗ : ಡಿ.19ರಂದು ಕೇಂದ್ರ ಸಚಿವ ನಿತಿನ್ ಗಟ್ಕರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ 721 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಲಿದ್ದಾರೆ ಎಂದು ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ತಿಳಿಸಿದ್ದಾರೆ.
ಡಿಸೆಂಬರ್ 19ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಆನ್ಲೈನ್ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಅಂದು ಸಚಿವರು 529 ಕೋಟಿ ರೂ.ವೆಚ್ಚದಲ್ಲಿ ಶಿವಮೊಗ್ಗ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಅದೇ ರೀತಿ ಶಿವಮೊಗ್ಗದ ವಿದ್ಯಾನಗರದ ಬಳಿ ರೈಲ್ವೆ ಓವರ್ ಬ್ರಿಡ್ಜ್ಗೆ ಶಂಕು ಸ್ಥಾಪನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯನ್ನು 96 ಕೋಟಿ ರೂ. ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. 23.97ಬೈಂದೂರು-ಹೊಸನಗರ ಸೇತುವೆ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಶಿವಮೊಗ್ಗ- ಸಾಗರ ರಸ್ತೆಯ ಚೋರಡಿ ಬಳಿಯ ಕುಮದ್ವತಿ ನದಿಯ ನೂತನ ಸೇತುವೆಯನ್ನು ಉದ್ಘಾಟನೆ ಮಾಡಲಿದ್ದಾರೆ ಎಂದರು.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಡಿ. 12ರವರೆಗೆ ನಿಷೇಧಾಜ್ಞೆ ವಿಸ್ತರಣೆ
ಅದೇ ರೀತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಿವಮೊಗ್ಗ ಜಿಲ್ಲೆಗೆ ಇನ್ನೆರಡು ವಾರದಲ್ಲಿ ಆಗಮಿಸಲಿದ್ದಾರೆ. ಇವರು ಭದ್ರಾವತಿ ತಾಲೂಕು ಬುಳ್ಳಾಪುರದಲ್ಲಿ ಆರ್ಎಎಫ್ ಬೆಟಾಲಿಯನ್ ಸ್ಥಾಪನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಆರ್ಎಎಫ್ ಕೇಂದ್ರಕ್ಕೆ 50.29 ಗುಂಟೆ ಜಾಗ ನೀಡಲಾಗಿದೆ. ಇದು ಕರ್ನಾಟಕ ಹಾಗೂ ಕೇರಳಕ್ಕೆ ಕೇಂದ್ರವಾಗಲಿದೆ ಎಂದರು.
ಸೆಕ್ಷನ್ ಹಂತ ಹಂತವಾಗಿ ತೆರವು : ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಸಡಿಲಿಕೆ ಬಗ್ಗೆ ತಿಳಿಸಲಾಗಿದೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಆದಷ್ಟು ಬೇಗ ಸೆಕ್ಷನ್ ತೆರವು ಮಾಡಲಾಗುವುದು. ಸೆಕ್ಷನ್ನಿಂದಾಗಿ ಜನಸಾಮಾನ್ಯರಿಗೆ, ವ್ಯಾಪಾರಿಗಳಿಗೆ ತೊಂದರೆ ಆಗುತ್ತಿರುವ ಕುರಿತು ತಿಳಿಸಲಾಗಿದೆ ಎಂದರು.