ETV Bharat / state

ವಿದ್ಯಾರ್ಥಿನಿಲಯಗಳಿಗೆ ಸಿಇಒ ದಿಢೀರ್ ಭೇಟಿ - government hostels

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಶಿವಮೊಗ್ಗದ ಕೋಟೆ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಕುಂದುಕೊರತೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು.

ಹಾಸ್ಟೆಲ್​ಗಳಲ್ಲಿ ವಿದ್ಯಾರ್ಥಿನಿಯರನ್ನು ಮಾತನಾಡಿಸಿದರು.
author img

By

Published : Aug 30, 2019, 2:54 AM IST

ಶಿವಮೊಗ್ಗ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಬುಧವಾರ ಸಂಜೆ ಶಿವಮೊಗ್ಗ ನಗರದಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

smg
ಅಡುಗೆ ರುಚಿ ಸವಿದ ಸಿಇಒ

ಕೋಟೆ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ನಂತರದ ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಕುಂದುಕೊರತೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಆಲಿಸಿದರು.

ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಮೇಲ್ವಿಚಾರಕರು ಗೈರು ಹಾಜರಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಇಲಾಖಾ ಅಧಿಕಾರಿಗೆ ಸೂಚನೆ ನೀಡಿದರು.

Intro:ಶಿವಮೊಗ್ಗ,

ವಿದ್ಯಾರ್ಥಿ ನಿಲಯಗಳಿಗೆ ಸಿಇಒ ದಿಢೀರ್ ಭೇಟಿ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ಬುಧವಾರ ಸಂಜೆ ಶಿವಮೊಗ್ಗ ನಗರದಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅವರು ಕೋಟೆ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ನಂತರದ ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಕುಂದುಕೊರತೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನಿಲಯದ ಸಮಸ್ಯೆಗಳನ್ನು ಸಿಇಒ ಅವರೊಂದಿಗೆ ತೋಡಿಕೊಂಡರು. ವಿದ್ಯಾರ್ಥಿನಿಯರಿಗೆ ನ್ಯಾಪ್ಕಿನ್ ಬರ್ನರ್ ಯಂತ್ರ ಲಭ್ಯವಿರುವುದಿಲ್ಲ. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿ ನಿಲಯದಲ್ಲಿ ಬಯೋಮೆಟ್ರಿಕ್ ಹಾಜರಾತಿ ಯಂತ್ರ ಸುಮಾರು 2ತಿಂಗಳಿನಿಂದ ಹಾಳಾಗಿದ್ದು ರಿಪೇರಿ ಮಾಡಿಸಿರುವುದಿಲ್ಲ. ಇದರಿಂದ ವಿದ್ಯಾರ್ಥಿಗಳ ಹಾಜರಾತಿ ನಿಖರವಾಗಿ ದಾಖಲಿಸಲು ಸಾಧ್ಯವಾಗುತ್ತಿಲ್ಲ. ಇದನ್ನು ತಕ್ಷಣ ಸರಿಪಡಿಸುವಂತೆ ಅವರು ಸೂಚನೆ ನೀಡಿದರು.

ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಇದನ್ನು ಅಕ್ವಾಗಾರ್ಡ್ ಆರ್‍ಒ ಉಪಯೋಗಿಸಬೇಕು. ಪ್ರತಿ ತಿಂಗಳಿಗೊಮ್ಮೆ ನೀರಿನ ಟ್ಯಾಂಕ್ ತೊಳೆಯಬೇಕು. ವಿದ್ಯಾರ್ಥಿ ನಿಲಯದ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಅಡುಗೆ ಕೋಣೆಯನ್ನು ಸಹ ಸ್ವಚ್ಛವಾಗಿರಿಸಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆಯಾಗುತ್ತಿದ್ದು, ಉತ್ತಮವಾದ ಶುಚಿರುಚಿಯಾದ ಆಹಾರ ಒದಗಿಸಬೇಕು ಎಂದು ಹೇಳಿದರು.

ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಮೇಲ್ವಿಚಾರಕರು ಗೈರು ಹಾಜರಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಇಲಾಖಾ ಅಧಿಕಾರಿ ಅವರಿಗೆ ಸೂಚನೆ ನೀಡಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.