ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ತಾಂಡದ ಜೀಮಿಬಾಯಿ (50) ಎಂಬ ಮಹಿಳೆಯ ಸಾವು ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಮೃತ ಮಹಿಳೆಯ ಮಗ ಮಂಜು ನಾಯ್ಕ್ ಹಾಗೂ ಸಂಬಂಧಿಕರು ಇಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮೃತರ ಸಂಬಂಧಿಕರ ಮನವಿ ಸ್ವೀಕರಿಸಿ ಮಾತನಾಡಿದ ಎಸ್ಪಿ ಮಿಥುನ್ ಕುಮಾರ್, ಮಾರ್ಚ್ 11 ರಂದು ಚಿಕ್ಕಮಾಗಡಿ ತಾಂಡದ ಜೀಮಿಬಾಯಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ತನ್ನ ತಾಯಿಯನ್ನು ಅದೇ ಗ್ರಾಮದ ಹಾಲೇಶ ನಾಯ್ಕ್ ಹಾಗೂ ಹೇಮಂತ ನಾಯ್ಕ್ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ, ಮೃತಳ ಮಗ ಮಾರ್ಚ್ 13 ರಂದು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. 302 ಮತ್ತು 376 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ವೇಳೆ ಅನೇಕ ಮಾಹಿತಿಗಳು ಲಭ್ಯವಾಗಿವೆ. ನಮ್ಮ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಐ ಅವರು ತನಿಖೆ ನಡೆಸುತ್ತಿದ್ದಾರೆ. ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ದೊಣ್ಣೆಯಿಂದ ಹೊಡೆದು ತಾಯಿಯ ಕೊಲೆ ಮಾಡಿದ ಮಗ