ಶಿವಮೊಗ್ಗ: ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾಬಾಲ ಕಾರ್ಮಿಕ ಯೋಜನಾ ಸೊಸೈಟಿ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಬಾಲ ಕಾರ್ಮಿಕ ಜಾಗೃತಿ ಅಭಿಯಾನವನ್ನು ಅಪರ ಜಿಲ್ಲಾಧಿಕಾರಿ ಅನುರಾಧ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
18 ವರ್ಷದೊಳಗಿನ ಮಕ್ಕಳಿಗೆ ಹೋಟೆಲ್, ಅಂಗಡಿ, ಗ್ಯಾರೇಜ್ ಹಾಗೂ ಇತರೆ ವಾಣಿಜ್ಯ ಸಂಸ್ಥೆಗಳಲ್ಲಿ ಹಾಗೂ ಮನೆಗಳಲ್ಲಿ ಗೃಹಕೃತ್ಯ ಕೆಲಸಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ತೊಡಗಿಸಿಕೊಳ್ಳುವುದು ಅಪರಾದ.
ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬಿದಿನಾಟಕದ ಮೂಲಕ ಜಿಲ್ಲೆಯ ಏಳು ತಾಲ್ಲೂಕುಗಳಲ್ಲಿ ಜಾಗೃತಿ ಮತ್ತು ಅರಿವನ್ನು ಮೂಡಿಸಲಾಗುವುದು. ಹಾಗಾಗಿ ರಂಗ ಕಲಾತಂಡದ ಸದಸ್ಯರನೊಳಗೊಂಡ ಒಂದು ತಂಡ ಜಾಗೃತಿ ಮೂಡಿಸಲು ಸಜ್ಜಾಗಿದ್ದು, ಅಪರ ಜಿಲ್ಲಾಧಿಕಾರಿಗಳು ಅದಕ್ಕೆ ಚಾಲನೆ ನೀಡಿದರು.