ETV Bharat / state

ಬಾಲ ಕಾರ್ಮಿಕರ ಪತ್ತೆಗೆ ಇಲಾಖೆಗಳ ನಡುವೆ ಸಮನ್ವಯ ಅಗತ್ಯ: ಶಿವಮೊಗ್ಗ ಡಿಸಿ - ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಕಾರ್ಯಕಾರಿ ಸಮಿತಿ

ಕಟ್ಟಡ ನಿರ್ಮಾಣ ನಡೆಯುವ ಸ್ಥಳಗಳಲ್ಲಿ ಕಾರ್ಮಿಕರ ಮಕ್ಕಳು ಕೆಲಸ ಮಾಡುವ ಸಾಧ್ಯತೆಯಿದೆ. ಅಂತಹ ಸ್ಥಳಗಳ ಮೇಲೆ ನಿಗಾ ಇಡಬೇಕು. ಕಟ್ಟಡ ನಿರ್ಮಾಣದಾರರಿಗೆ ಈ ಕುರಿತು ಸ್ಪಷ್ಟ ಎಚ್ಚರಿಕೆ ನೀಡಬೇಕು. ಈ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಸಹ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

DC KB Shivakumar
ಡಿಸಿ ಕೆ.ಬಿ.ಶಿವಕುಮಾರ್
author img

By

Published : Nov 4, 2020, 7:45 PM IST

ಶಿವಮೊಗ್ಗ: ಕೊರೊನಾ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಕಾರ್ಮಿಕರಾಗಿ ದುಡಿಯುವ ಸಾಧ್ಯತೆಯಿದ್ದು, ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದರು. ಬಾಲ ಕಾರ್ಮಿಕರ ಬಗ್ಗೆ ದೂರು ಬಂದರೆ ಮಾತ್ರ ಕ್ರಮ ಕೈಗೊಂಡರೆ ಸಾಲದು. ಸ್ವಯಂಪ್ರೇರಿತರಾಗಿ ನಿರಂತರ ಪರಿಶೀಲನೆ ನಡೆಸುವ ಅಗತ್ಯವಿದೆ. ಇದಕ್ಕಾಗಿ ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸ್ಥಳೀಯ ಆಡಳಿತ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಕ್ಕಳ ಸಹಾಯವಾಣಿಗೆ ಬರುವ ದೂರುಗಳನ್ನು ತಕ್ಷಣ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕಟ್ಟಡ ನಿರ್ಮಾಣ ನಡೆಯುವ ಸ್ಥಳಗಳಲ್ಲಿ ಕಾರ್ಮಿಕರ ಮಕ್ಕಳು ಕೆಲಸ ಮಾಡುವ ಸಾಧ್ಯತೆಯಿದೆ. ಅಂತಹ ಸ್ಥಳಗಳ ಮೇಲೆ ನಿಗಾ ಇಡಬೇಕು. ಕಟ್ಟಡ ನಿರ್ಮಾಣದಾರರಿಗೆ ಈ ಕುರಿತು ಸ್ಪಷ್ಟ ಎಚ್ಚರಿಕೆ ನೀಡಬೇಕು. ಅಪಾಯಕಾರಿ ಕೆಲಸಗಳಲ್ಲಿ 18 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ತೊಡಗಿಸುವಂತಿಲ್ಲ. ಈ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಸಹ ಕೈಗೊಳ್ಳಬೇಕು ಎಂದು ಹೇಳಿದರು.

ಬಾಲ ಕಾರ್ಮಿಕರ ತಪಾಸಣೆ: ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲು 622 ತಪಾಸಣೆ ನಡೆಸಲಾಗಿದ್ದು, 4 ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ ಮೊಕದ್ದಮೆ ದಾಖಲಿಸಲಾಗಿದೆ. ಈ ವರ್ಷದ ಪ್ರಥಮ ಆರು ತಿಂಗಳ ಅವಧಿಯಲ್ಲಿ 106 ಕಡೆ ತಪಾಸಣಾ ಕಾರ್ಯ ಕೈಗೊಳ್ಳಲಾಗಿದ್ದು, ಒಬ್ಬ ಬಾಲ ಕಾರ್ಮಿಕ ಪತ್ತೆಯಾಗಿದ್ದಾನೆ. 2016-17ನೇ ಸಾಲಿನಲ್ಲಿ 11, 17-18ನೇ ಸಾಲಿನಲ್ಲಿ 5 ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಪಿ.ವಿಶ್ವನಾಥ ಮಾಹಿತಿ ನೀಡಿದರು.

ಆಶಾದೀಪ ಯೋಜನೆ ಲಾಭ ಪಡೆಯಿರಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳನ್ನು ಖಾಸಗಿ ವಲಯದ ಉದ್ಯೋಗಗಳಲ್ಲಿ ನೇಮಕಾತಿ ಮಾಡುವುದನ್ನು ಉತ್ತೇಜಿಸಲು ಸರ್ಕಾರ ಆಶಾದೀಪ ಯೋಜನೆ ಜಾರಿಗೊಳಿಸಿದೆ. ಪ.ಜಾತಿ, ಪಂಗಡದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡ ಸಂಸ್ಥೆಗಳು ಪಾವತಿಸುವ ನೌಕರರ ಇ.ಎಸ್.ಐ ಹಾಗೂ ಪಿ.ಎಫ್ ವಂತಿಕೆಯನ್ನು ಯೋಜನೆಯಡಿ ಮರು ಪಾವತಿಸಲಾಗುವುದು. ಅಪ್ರೆಂಟಿಸ್‍ಗಳ ಶಿಷ್ಯವೇತನವನ್ನು ಸಹ ಉದ್ಯೋಗದಾತರಿಗೆ ಮರು ಪಾವತಿಸಲಾಗುವುದು. ಉದ್ದಿಮೆಗಳು ಇದರ ಪ್ರಯೋಜನ ಪಡೆದುಕೊಳ್ಳುವ ಕುರಿತು ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಆಶಾದೀಪ ಯೋಜನೆಯಡಿ ಜಿಲ್ಲೆಯಲ್ಲಿ 50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ 24 ಫಲಾನುಭವಿಗಳನ್ನು ನೇಮಕ ಮಾಡಿರುವ ಒಟ್ಟು 3 ಸಂಸ್ಥೆಗಳಿಗೆ 1.58 ಲಕ್ಷ ರೂ. ಮರು ಪಾವತಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.