ಶಿವಮೊಗ್ಗ: ಕ್ರೈಸ್ತ ಸಮುದಾಯದ ಗುರುಗಳಾದ ಸಭಾಪಾಲಕರಿಗೆ ಆರ್ಥಿಕ ಪ್ಯಾಕೇಜ್ ಹಾಗೂ ಆಹಾರ ಪದಾರ್ಥಗಳ ನೆರವು ನೀಡುವಂತೆ ಆಗ್ರಹಿಸಿ ಅಖಿಲ ಭಾರತ ಕ್ರೈಸ್ತ ಮಹಾಸಭಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ದೇಶವೇ ಲಾಕ್ಡೌನ್ನಿಂದ ತತ್ತರಿಸಿದೆ. ಅದರಂತೆ ಕ್ರೈಸ್ತ ಸಮುದಾಯದ ಸಭಾಪಾಲಕರಿಗೆ ಜೀವನ ನಡೆಸುವುದು ತುಂಬಾ ಕಷ್ಟವಾಗಿದ್ದು, ಅವರ ನೆರವಿಗೆ ಸರ್ಕಾರ ಧಾವಿಸಬೇಕು. ಇಲ್ಲವಾದರೆ ಬದುಕು ನಡೆಸುವುದು ಕಷ್ಟವಾಗುತ್ತದೆ. ಸರ್ಕಾರ ಕೂಡಲೇ ಆರ್ಥಿಕವಾಗಿ ಹಾಗೂ ಆಹಾರ ಪದಾರ್ಥಗಳನ್ನು ನೀಡುವ ಮೂಲಕ ನಮ್ಮ ನೆರವಿಗೆ ಬರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.