ಶಿವಮೊಗ್ಗ: ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕಾರ್ಮಿಕರ ಸುರಕ್ಷತೆಗೆ ಸುರಕ್ಷತಾ ಕೀಟ್ ನೀಡಬೇಕು ಹಾಗೂ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸುರಕ್ಷತಾ ಕಿಟ್ಗಳ ಕೊರತೆ ಇದೆ. ಹೀಗಾಗಿ ಸರ್ಕಾರ ಕೂಡಲೇ ಕಂಟೇನ್ಮೆಂಟ್ ಹಾಗೂ ಕೆಂಪು ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಪಿಪಿಇ ಕಿಟ್ಗಳನ್ನು ವಿತರಿಸಬೇಕು ಎಂದಿದ್ದಾರೆ.
ಅಲ್ಲದೆ ಕೊರೊನಾ ಕರ್ತವ್ಯದಲ್ಲಿರುವ ಎಲ್ಲಾ NHM ಗುತ್ತಿಗೆ ಸ್ಕೀಂ ನೌಕರರಿಗೆ ಹೆಚ್ಚುವರಿ ಪ್ರೋತ್ಸಾಹಧನ ನೀಡಬೇಕು. ಮೇ 10ರಂದು ಮೃತರಾದ ಆಶಾ ಕಾರ್ಯಕರ್ತೆ ಸಾಕಮ್ಮ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.