ಶಿವಮೊಗ್ಗ: ಹಥ್ರಾಸ್ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣವನ್ನು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಲಾಯಿತು.
ಉತ್ತರ ಪ್ರದೇಶ ಹಥ್ರಾಸ್ನ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣವನ್ನು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಗೆ ಒಪ್ಪಿಸಿ, ನಿಗದಿತ ಅವಧಿಯಲ್ಲಿ ಪರಿಣಾಮಕಾರಿ ತನಿಖೆ ನಡೆಸಬೇಕು ಹಾಗೂ ಮೃತ ಯುವತಿಯ ಕುಟುಂಬಕ್ಕೆ ರಕ್ಷಣೆ ನೀಡಬೇಕು ಮತ್ತು ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಕರ್ತವ್ಯ ಉಲ್ಲಂಘಿಸಿರುವ ಪೊಲೀಸ್ ಮತ್ತು ಇತರ ಅಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ದೌರ್ಜನ್ಯಕ್ಕೊಳಗಾದ ಎಲ್ಲ ಕುಟುಂಬಗಳಿಗೆ ಸರ್ಕಾರ ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸಿದರು.