ಶಿವಮೊಗ್ಗ : ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ ದರ್ಜೆಯ ಗುತ್ತಿಗೆ ಪೌರ ಕಾರ್ಮಿಕರನ್ನು ಖಾಲಿ ಇರುವ ಲೋಡರ್ಸ್ ಹುದ್ದೆಗಳಿಗೆ ಖಾಯಂಗೊಳಿಸಬೇಕು ಎಂದು ಆಗ್ರಹಿಸಿ ಡಾ. ಭೀಮ್‌ರಾವ್ ಅಂಬೇಡ್ಕರ್ ಗುತ್ತಿಗೆ ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪಾಲಿಕೆಯಲ್ಲಿ 12 ವರ್ಷಗಳಿಂದ ಗುತ್ತಿಗೆ ಪೌರ ಕಾರ್ಮಿಕರಾಗಿ ಕಾರ್ಯನಿವಹಿಸಿಕೊಂಡು ಬಂದಿದ್ದೇವೆ. ನಮ್ಮ ಸೇವೆಗೆ ತಕ್ಕ ಗೌರವ ಸಿಗುತ್ತಿಲ್ಲ. ಕೊರೊನಾ ಸಂದರ್ಭದಲ್ಲಿ ಹಗಲಿರುಳು ಕೆಲಸ ಮಾಡಿದ್ದೇವೆ. ನಮ್ಮ ಸೇವೆಯನ್ನು ಗಮನಿಸಿ, ಖಾಲಿ ಇರುವ ಲೋಡರ್ಸ್ ಹುದ್ದೆಗಳಿಗೆ ಖಾಯಂ ಮಾಡಬೇಕು ಎಂದು ಕಾರ್ಮಿಕರು ಒತ್ತಾಯಿಸಿದರು.