ಶಿವಮೊಗ್ಗ: ಎರಡು ದಿನಗಳ ಕಾಲ ತವರು ಜಿಲ್ಲೆ ಶಿವಮೊಗ್ಗ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿಕಾರಿಪುರದ ನಿವಾಸದಲ್ಲಿ ಶಿಕಾರಿಪುರ ತಾಲೂಕಿನ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಈ ಸಂದರ್ಭ ಸಂಸದ ಬಿ.ವೈ. ರಾಘವೇಂದ್ರ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎರಡು ದಿನಗಳ ಕಾಲ ಪ್ರಗತಿ ಪರಿಶೀಲನಾ ಸಭೆ, ವಿಮಾನ ನಿಲ್ದಾಣ ಭೇಟಿ, ಉಡತಡಿ ಅಕ್ಕಮಹಾದೇವಿ ಜನ್ಮಸ್ಥಳ ಅಭಿವೃದ್ಧಿ ಕಾಮಗಾರಿ, ನೀರಾವರಿ ಯೋಜನೆ ಅಭಿವೃದ್ಧಿ ಕಾಮಗಾರಿ, ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಇಂದು ಶಿಕಾರಿಪುರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಓದಿ: ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್ವೈ