ETV Bharat / state

ಆರ್​ ಆರ್​ ನಗರ, ಶಿರಾ ಮಿನಿ ಸಮರ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಯಡಿಯೂರಪ್ಪ

ಆರ್​. ಆರ್​ ನಗರ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರ ಒಲವಿದೆ. ಎರಡೂ ಕಡೆಯೂ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

CM expressed confidence in winning by-election
ಉಪಚುನಾವಣೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂ
author img

By

Published : Oct 18, 2020, 3:34 PM IST

ಶಿವಮೊಗ್ಗ : ಶಿರಾ ಹಾಗೂ ಆರ್. ಆರ್ ನಗರ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರ ಒಲವಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಎರಡು ದಿನಗಳಿಂದ ಶಿರಾದಲ್ಲಿಯೇ ಠಿಕಾಣಿ ಹೂಡಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಶಿಕಾರಿಪುರದಲ್ಲಿ ಸಿಎಂ ಬಿಎಸ್​.ಯಡಿಯೂರಪ್ಪ ಹೇಳಿದರು.

ಸ್ವಕ್ಷೇತ್ರದಲ್ಲಿ ಮೂರು ದಿನಗಳ ಪ್ರವಾಸಕ್ಕಾಗಿ ಸಿಎಂ ಇಂದು ಶಿಕಾರಿಪುರಕ್ಕೆ ಆಗಮಿಸಿದರು. ಈ ವೇಳೆ ಮಾತನಾಡಿದ ಅವರು, ಶಿಕಾರಿಪುರ ಮಾದರಿ ತಾಲೂಕು ಆಗಿದೆ. ಶಿವಮೊಗ್ಗ ಜಿಲ್ಲೆ ಹಾಗೂ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ನಡೆಯುತ್ತಿವೆ. ಮೂರು ದಿನಗಳ ಕಾಲ ಕ್ಷೇತ್ರದಲ್ಲಿಯೇ ಪ್ರವಾಸ ಕೈಗೊಳ್ಳಲಿದ್ದೇನೆ ಎಂದರು. ಇದೇ ವೇಳೆ, ಶಿರಾ ಹಾಗೂ ಆರ್​. ಆರ್​ ನಗರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಬಿಎಸ್​ವೈ

ಉತ್ತರ ಕರ್ನಾಟಕ ಪ್ರವಾಹದ ಬಗ್ಗೆ ಮಾತನಾಡಿ, ಈ ಬಗ್ಗೆ ಪ್ರಧಾನಿಯವರ ಜೊತೆ ಮಾತನಾಡಿದ್ದೇನೆ. ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಮಾಡಿದ್ದೇನೆ. ಕೇಂದ್ರದಿಂದ ಹೆಚ್ಚಿನ ಪರಿಹಾರ ಕೊಡುವ ನಿರೀಕ್ಷೆ ಇದೆ ಎಂದರು.

ಸಿಗಂದೂರು ದೇವಾಲಯದಲ್ಲಿ ಅರ್ಚಕರು ಹಾಗೂ ಟ್ರಸ್ಟಿ ನಡುವೆ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿ, ದೇವಾಲಯದ ಪ್ರಮುಖರ ಜೊತೆ ಜಿಲ್ಲಾಧಿಕಾರಿ ಚರ್ಚೆ ನಡೆಸಿದ್ದಾರೆ. ದೇವಾಲಯದಲ್ಲಿ ಗಲಾಟೆ ನಡೆಯಬಾರದು, ಅದು ಶೋಭೆ ತರುವಂತಹದ್ದಲ್ಲ. ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸುವ ಬಗ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ, ಶಾಸಕರಾದ‌ ಹಾಲಪ್ಪ, ಕುಮಾರ ಬಂಗಾರಪ್ಪರ ಜೊತೆ ಚರ್ಚೆ ನಡೆಸುತ್ತೇವೆ. ಜಿಲ್ಲಾಧಿಕಾರಿಯಿಂದ ವರದಿ ತರಿಸಿಕೊಳ್ಳುತ್ತೇನೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.