ETV Bharat / state

ಬಿಎಸ್​ವೈ ಕನಸಿಗೆ ಮೂಡಿದ 'ರೆಕ್ಕೆ': ಶಿವಮೊಗ್ಗದಲ್ಲಿ ನಿರ್ಮಾಣವಾಗಲಿದೆ ಸುಸಜ್ಜಿತ ವಿಮಾನ ನಿಲ್ದಾಣ - ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ

ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗೆ, ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆನ್‍ಲೈನ್ ಮೂಲಕ ಚಾಲನೆ ನೀಡಿರು.

cm bsy flags off constructionwork on shivamogga airport
ನನಸಾದ ಸಿಎಂ ಬಿಎಸ್​ವೈ ಕನಸು
author img

By

Published : Jun 15, 2020, 4:04 PM IST

ಶಿವಮೊಗ್ಗ: ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣದಿಂದಾಗಿ, ಜಿಲ್ಲೆಯ ಹಾಗೂ ಸುತ್ತಲಿನ ಜಿಲ್ಲೆಗಳ ಪ್ರವಾಸೋದ್ಯಮ ಹಾಗೂ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಉತ್ತೇಜನ ದೊರೆಯುವ ನಿರೀಕ್ಷೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ, ಆನ್‍ಲೈನ್ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ 662.38 ಎಕರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದೆ. ಕಾಮಗಾರಿಯನ್ನು ಎರಡು ಹಂತಗಳಲ್ಲಿ ಕೈಗೊಳ್ಳಲಾಗುತ್ತಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದರು.

ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗೆ ಚಾಲನೆ

ಗುಣ ಮಟ್ಟದಲ್ಲಿ ಯಾವುದೇ ರಾಜಿಯಿಲ್ಲದೆ ನಿಗದಿತ ಸಮಯದ ಒಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಬೇಕು. ಉಡಾನ್ ಯೋಜನೆಯಿಂದಾಗಿ ಜನಸಾಮಾನ್ಯರೂ ವಿಮಾನಯಾನ ಕೈಗೊಳ್ಳಬಹುದಾದ ವಾತಾವರಣವಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ನೀರಾವರಿ ಯೋಜನೆಗಳು, ಶಾಲೆಗಳಲ್ಲಿ ಮೂಲಭೂತ ಸೌಲಭ್ಯ, ಕುಡಿಯುವ ನೀರು, ರಸ್ತೆ ಸಂಪರ್ಕ ಅನುಷ್ಠಾನಗೊಳಿಸಲಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಗೆ ವೇಗ ದೊರೆತಿದ್ದು, ಶಿವಮೊಗ್ಗ-ಶಿಕಾರಿಪುರ ರೈಲ್ವೇ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

  • ಶಿವಮೊಗ್ಗ ಜಿಲ್ಲೆ ಜನರ ಬಹುನಿರೀಕ್ಷಿತ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. ಮೂಲಭೂತ ಸೌಕರ್ಯಾಭಿವೃದ್ಧಿ, ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಆನ್ ಲೈನ್ ಮೂಲಕ ಇಂದು ಭೂಮಿಪೂಜೆ, ಶಂಕುಸ್ಥಾಪನೆ ನೆರವೇರಿಸಲಾಯಿತು. ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ನಿಟ್ಟಿನಲ್ಲಿ ಇದು ಮೈಲಿಗಲ್ಲಾಗಿದೆ. pic.twitter.com/aGef8oQCLD

    — B.S. Yediyurappa (@BSYBJP) June 15, 2020 " class="align-text-top noRightClick twitterSection" data=" ">

ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯ ನೂತನ ವಿಭಾಗ ಕಚೇರಿ ಆರಂಭಿಸಿರುವುದರಿಂದ, ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ವೇಗ ದೊರೆಯಲಿದೆ. ಸಿಗಂದೂರು ಬಳಿ ಶರಾವತಿ ಹಿನ್ನೀರಿಗೆ ಸೇತುವೆ ನಿರ್ಮಾಣ ಕಾರ್ಯ ಆರಂಭಿಸುವ ಮೂಲಕ, ಜಿಲ್ಲೆಯ ಈ ಭಾಗದ ಜನರ ಬಹು ವರ್ಷಗಳ ಕನಸು ನನಸಾಗುತ್ತಿದೆ ಎಂದು ಹೇಳಿದರು.

ಇನ್ನು ಸ್ಥಳೀಯ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ, ವಿಮಾನ ನಿಲ್ದಾಣದಿಂದಾಗಿ ಜಿಲ್ಲೆಯಲ್ಲಿ ಹೆಚ್ಚಿನ ಕೈಗಾರಿಕೆ ಆರಂಭವಾಗುವ ನಿರೀಕ್ಷೆಯಿದೆ. ಈ ಮೂಲಕ ಯುವ ಜನಾಂಗಕ್ಕೆ ಹೆಚ್ಚಿನ ಉದ್ಯೋಗವಕಾಶ ಸೃಷ್ಟಿಯಾಗಲಿದೆ ಎಂದು ಹೇಳಿದರು.

ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಮಾತನಾಡಿ, ಕಳೆದ ಒಂದು ವರ್ಷ ಅವಧಿಯಲ್ಲಿ ಹಲವು ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿಕೊಂಡು ಇಂದು ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ ಎಂದರು.

ಕಾಮಗಾರಿಯ ವಿವರ

ಕಾಮಗಾರಿಯನ್ನು ಎರಡು ಹಂತಗಳಲ್ಲಿ ಕೈಗೊಳ್ಳಲಾಗುತ್ತಿದ್ದು, ಪ್ರಥಮ ಹಂತದಲ್ಲಿ ರನ್ ವೇ, ಟ್ಯಾಕ್ಸಿ ವೇ, ಏಪ್ರಾನ್, ಅಪ್ರೋಚ್ ರಸ್ತೆ, ಪೆರಿಫೆರಲ್ ರಸ್ತೆ ಹಾಗೂ ಕಂಪೌಂಡ್ ಗೋಡೆ ನಿರ್ಮಾಣ ಕೈಗೊಳ್ಳಲಾಗಿದೆ. ಎರಡನೇ ಹಂತದಲ್ಲಿ ಟರ್ಮಿನಲ್ ಕಟ್ಟಡ, ಎಟಿಸಿ ಟವರ್, ಫೈರ್ ಸ್ಟೇಷನ್ ಕಟ್ಟಡ ಇತ್ಯಾದಿ ಕೈಗೊಳ್ಳಲಾಗುವುದು.

ಈ ವೇಳೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಶಾಸಕರಾದ ಆರಗ ಜ್ಞಾನೇಂದ್ರ, ಅಶೋಕ ನಾಯ್ಕ, ಕುಮಾರ ಬಂಗಾರಪ್ಪ, ಹರತಾಳು ಹಾಲಪ್ಪ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಮೇಯರ್ ಸುವರ್ಣ ಶಂಕರ್ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.