ETV Bharat / state

ರಂಗಾಯಣ ವೆಬ್​​​ಸೈಟ್​ಗೆ ಚಾಲನೆ ನೀಡಿದ ಸಿಎಂ ಬಿಎಸ್​ವೈ

ರಂಗಾಯಣ ವಿವಿಧ ಕಾರ್ಯಕ್ರಮಗಳ ಮೂಲಕ ರಂಗಚಟುವಟಿಕೆಗಳನ್ನು ಜೀವಂತವಾಗಿರಿಸಿರುವುದು ಪ್ರಶಂಸನೀಯ ಎಂದು ಸಿಎಂ ಬಿಎಸ್​ವೈ ಹೊಗಳಿದ್ದಾರೆ.

cm bsy launched  Rangayana website
ರಂಗಾಯಣ ವೆಬ್​​​ಸೈಟ್​ಗೆ ಚಾಲನೆ ನೀಡಿದ ಸಿಎಂ ಬಿಎಸ್​ವೈ
author img

By

Published : Jan 3, 2021, 3:19 AM IST

ಶಿವಮೊಗ್ಗ: ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ರಂಗಾಯಣ ಕಳೆದ 10 ವರ್ಷಗಳಲ್ಲಿ ದೃಢವಾದ ಹೆಜ್ಜೆಯನ್ನು ಇರಿಸಿದ್ದು, ರಂಗಾಯಣದ ವೆಬ್​ಸೈಟ್​ಗೆ ಸಿಎಂ ಚಾಲನೆ ನೀಡಿದ್ದಾರೆ.

ಶಿವಮೊಗ್ಗದ ವಿನೋಬನಗರದ ತಮ್ಮ ನಿವಾಸದಲ್ಲಿ ರಂಗಾಯಣದ ನೂತನ ವೆಬ್​ಸೈಟ್​​ಗೆ ಚಾಲನೆ ನೀಡಿ ಮಾತನಾಡಿದ ಅವರು, ಶಿವಮೊಗ್ಗ ರಂಗಾಯಣ ನಿರಂತರ ರಂಗ ಚಟುವಟಿಕೆಗಳ ಮೂಲಕ ರಂಗಾಸಕ್ತರನ್ನು ಸೆಳೆಯುತ್ತಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ನಿರಂತರ ರಂಗ ಚಟುವಟಿಕೆಗಳ ಮೂಲಕ ರಂಗಾಸಕ್ತರನ್ನು ರಂಗಾಯಣ ಸೆಳೆಯುತ್ತಿದೆ. ರಂಗ ಸಂಕ್ರಾತಿ ರಾಷ್ಟ್ರೀಯ ನಾಟಕೋತ್ಸವ, ವಿಶ್ವಮಾನವ ಅಂತಾರಾಷ್ಟ್ರೀಯ ರಂಗೋತ್ಸವ, ವಿಶ್ವರಂಗಭೂಮಿ ದಿನಾಚರಣೆ ಮುಂತಾದ ಕಾರ್ಯಕ್ರಮಗಳ ಮೂಲಕ ಹಾಗೂ ಆನ್​ಲೈನ್ ಕಾರ್ಯಕ್ರಮಗಳ ಮೂಲಕ ರಂಗಚಟುವಟಿಕೆಗಳನ್ನು ಜೀವಂತವಾಗಿರಿಸಿರುವುದು ಪ್ರಶಂಸನೀಯ ಎಂದು ಸಿಎಂ ಬಿಎಸ್​ವೈ ರಂಗಾಯಣವನ್ನು ಹೊಗಳಿದರು.

ಇದನ್ನೂ ಓದಿ: ಕಳೆದ ವರ್ಷದ ನೆನಪುಗಳನ್ನ ಮೆಲುಕು ಹಾಕಿದ ಸತೀಶ್ ನೀನಾಸಂ!- ವಿಡಿಯೋ

ರಂಗ ದಿಗ್ಗಜ ಬಿ.ವಿ.ಕಾರಂತರ ಕನಸಿನ ಕೂಸಾದ ರಂಗಾಯಣ ಮೈಸೂರಿನಿಂದ ಪ್ರಾರಂಭವಾಗಿ ಇಂದು ರಾಜ್ಯದ 4 ಭಾಗಗಳಲ್ಲಿ ತನ್ನ ಶಾಖೆಯನ್ನು ವಿಸ್ತರಿಸಿಕೊಂಡಿದೆ. ಶಿವಮೊಗ್ಗದಲ್ಲಿ ರಂಗಾಯಣಕ್ಕೆ ಸುಸಜ್ಜಿತವಾದ ಸುವರ್ಣ ಸಾಂಸ್ಕೃತಿಕ ಭವನವನ್ನು ಒದಗಿಸಲಾಗಿದ್ದು, ರಂಗ ಚಟುವಟಿಕೆಗಳಿಗೆ ಎಲ್ಲಾ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಸಿಎಂ ಭರವಸೆ ವ್ಯಕ್ತಪಡಿಸಿದರು.

ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ರುದ್ರೇಗೌಡ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ, ರಂಗಸಮಾಜದ ಸದಸ್ಯ ಹಾಲಸ್ವಾಮಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.