ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾಲ್ವರು ಸಿಬ್ಬಂದಿ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಪಾತ್ರರಾಗಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಪ್ರಶಂಸನೀಯ ಸೇವೆಗಾಗಿ 2017 ಹಾಗೂ 2018ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಜಿಲ್ಲಾ ಪೊಲೀಸ್ ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿತ್ತು.
- ಡಾ. ಶೇಖರ್ ಹೆಚ್.ಟಿ - ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ.
- ಕೆ.ಟಿ. ಗುರುರಾಜ್ - ಪೊಲೀಸ್ ನಿರೀಕ್ಷಕರು, ಸಿಇಎನ್ ಪೊಲೀಸ್ ಠಾಣೆ, ಶಿವಮೊಗ್ಗ.
- ಅಂಥೋನಿ - ಎಎಸ್ಐ, ದೊಡ್ಡಪೇಟೆ ಪೊಲೀಸ್ ಠಾಣೆ, ಶಿವಮೊಗ್ಗ.
- ಇಂದ್ರೇಶ - ಸಿಹೆಚ್ಸಿ- 1968, ಸಿಡಿಆರ್ ವಿಭಾಗ, ಜಿಲ್ಲಾ ಪೊಲೀಸ್ ಕಚೇರಿ ಶಿವಮೊಗ್ಗ.
ಇವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿರುತ್ತದೆ ಎಂದು ಎಸ್ಪಿ ಕೆ.ಎಂ ಶಾಂತರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.