ETV Bharat / state

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ: ಕೆಲಸ ಚುರುಕುಗೊಳಿಸಲು ಗುತ್ತಿಗೆದಾರರಿಗೆ ಸಿಎಂ ಸೂಚನೆ

ಸೋಗಾನೆಯಲ್ಲಿನ ವಿಮಾನ ನಿಲ್ದಾಣ ಕಾಮಗಾರಿಯನ್ನು ಇಂದು ಸಿಎಂ ವೀಕ್ಷಣೆ ಮಾಡಿದರು. ಸದ್ಯ ವಿಮಾನ ನಿಲ್ದಾಣ ಕಾಮಗಾರಿಗೆ 320 ಕೋಟಿ‌ ರೂ.‌ ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಚುರುಕುಗೊಳಿಸುವಂತೆ ಗುತ್ತಿಗೆದಾರರಿಗೆ ಬಿಎಸ್​​ವೈ ಸೂಚಿಸಿದ್ದಾರೆ.

Airport Works in Sogane
ಕಾಮಗಾರಿ ಚುರುಕುಗೊಳಿಸಲು ಗುತ್ತಿಗೆದಾರರಿಗೆ ಸಿಎಂ ಸೂಚನೆ
author img

By

Published : Feb 16, 2021, 12:46 PM IST

ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ‌ ನಿಲ್ದಾಣ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.

ಇಂದು ಸೋಗಾನೆಯಲ್ಲಿನ ವಿಮಾನ ನಿಲ್ದಾಣ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಅವರು ನಿಗದಿತ‌ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.

ಕಾಮಗಾರಿ ಚುರುಕುಗೊಳಿಸಲು ಗುತ್ತಿಗೆದಾರರಿಗೆ ಸಿಎಂ ಸೂಚನೆ

ಸದ್ಯ ವಿಮಾನ ನಿಲ್ದಾಣ ಕಾಮಗಾರಿಗೆ 320 ಕೋಟಿ‌ ರೂ.‌ ಬಿಡುಗಡೆ ಮಾಡಲಾಗಿದೆ. ಈಗಾಗಲೇ 1.7 ಕಿ.ಮೀ ರನ್ ವೇ ಕಾಮಗಾರಿ ನಡೆಸಲಾಗಿದೆ. ರನ್ ವೇ, ಕಾಂಪೌಂಡ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಮುಂದಿನ ಒಂದು ವರ್ಷದ ಒಳಗೆ ವಿಮಾನ ಹಾರಾಟ ಮಾಡುವ ನಿರೀಕ್ಷೆ ಇದೆ ಎಂದರು. ಹೊಸ ಟರ್ಮಿನಲ್ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ಎಲ್ಲಾ ಕಾಮಗಾರಿ ಒಟ್ಟಿಗೆ ಆರಂಭಕ್ಕೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಓದಿ: ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ: ಮಲೆನಾಡಿನ ಜನರಲ್ಲಿ ಮಂದಹಾಸ

ವಿಮಾನ ನಿಲ್ದಾಣ ಕಾಮಗಾರಿಗೆ ಯಾವುದೇ ಹಣಕಾಸಿನ ಕೊರತೆಯಾದಂತೆ ಕ್ರಮ ವಹಿಸಲಾಗಿದೆ. ವಿಮಾನ ನಿಲ್ದಾಣ ಕಾಮಗಾರಿಗೆ ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ನಾನು ಎರಡು ತಿಂಗಳು ಬಿಟ್ಟು ಮತ್ತೆ ಕಾಮಗಾರಿಗೆ ವೀಕ್ಷಣೆಗೆ ಬರುತ್ತೇನೆ. ಕಾಮಗಾರಿಯು ಒಂದು ವರ್ಷದ ಒಳಗೆ ಪೂರ್ಣವಾಗುವ ವಿಶ್ವಾಸವನ್ನು ಸಿಎಂ ವ್ಯಕ್ತಪಡಿಸಿದರು.

ವಿಮಾನ ನಿಲ್ದಾಣದ ಒಳಗೆ ಕಲ್ಲು ಗಣಿಗಾರಿಕೆ:

ವಿಮಾನ ನಿಲ್ದಾಣ ಕಾಮಗಾರಿಗೆ ಬೇಕಾದ ಜಲ್ಲಿ ಪಡೆಯಲು ವಿಮಾನ ನಿಲ್ದಾಣದ ಒಳಗೆಯೇ ಕಲ್ಲು ಗಣಿಗಾರಿಕೆಗೆ ಜಿಲ್ಲಾಧಿಕಾರಿ ಅವಕಾಶ ನೀಡಿದ್ದಾರೆ. ಇದರಿಂದ ಕಾಮಗಾರಿ ವಿಳಂಬವಾಗಲ್ಲ. ಕಲ್ಲು ಗಣಿಗಾರಿಕೆ ಮುಗಿದ ನಂತರ ಅಲ್ಲಿ ಉಂಟಾದ ಗುಂಡಿಯನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.