ಶಿವಮೊಗ್ಗ: ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಹಾಗೂ ಮಹಾನಗರ ಪಾಲಿಕೆ ಸದಸ್ಯರ ಜೊತೆ ಸಭೆ ನಡೆಸಿದ ಸಿಎಂ ಬಿಎಸ್ವೈ ವಿವಿಧ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ಮುಖ್ಯಮಂತ್ರಿಗಳೊಂದಿಗೆ, ಪಾಲಿಕೆ ಸದಸ್ಯರು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಬಗ್ಗೆ ಹಾಗೂ ಕೊರತೆ ಇರುವ ಅನುದಾನ ಬಿಡುಗಡೆಗೊಳಿಸುವಂತೆ ಮತ್ತು ಕೆಲವು ಹೊಸ ಯೋಜನೆಗಳ ಬಗ್ಗೆ ಮನವಿ ಮಾಡಿಕೊಂಡರು. ಹಾಗೆಯೇ, ಗಾಂಧಿ ಪಾರ್ಕ್ ಅವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಇದಕ್ಕೆ ತಕ್ಷಣ ಸ್ಪಂದಿಸಿದ ಸಿಎಂ, ಕೂಡಲೇ ಗಾಂಧಿ ಪಾರ್ಕ್ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳು ಗಮನಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ ರಾಘವೇಂದ್ರ, ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್,ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ, ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರುಳಿಧರ್, ಹಾಗೂ ವಿವಿಧ ನಿಗಮ ಮಂಡಳಿಗಳ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.