ETV Bharat / state

ಸಿಎಂ, ರಾಘವೇಂದ್ರ, ಈಶ್ವರಪ್ಪ ಶಿವಮೊಗ್ಗದಲ್ಲಿ ಅಭಿವೃದ್ಧಿ ಕಾರ್ಯ ಮಾಡ್ತಿದ್ದಾರೆ: ಚನ್ನಬಸಪ್ಪ

author img

By

Published : Nov 4, 2020, 5:53 PM IST

Updated : Nov 4, 2020, 7:24 PM IST

ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಬಿ‌.ವೈ. ರಾಘವೇಂದ್ರ ಮತ್ತು ಸಚಿವ ಈಶ್ವರಪ್ಪ ಬ್ರಹ್ಮ ,ವಿಷ್ಣು,ಮಹೇಶ್ವರರಂತೆ ನಗರದಲ್ಲಿ ಅಭಿವೃದ್ಧಿ ಕಾರ್ಯ ಗಳನ್ನು ಮಾಡುತ್ತಿದ್ದಾರೆ. ಇದರಿಂದ ಶಿವಮೊಗ್ಗ ನಗರದಲ್ಲಿ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿದೆ ಎಂದು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ ಹೇಳಿದ್ದಾರೆ.

ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ

ಶಿವಮೊಗ್ಗ: ಸಿಎಂ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಸಚಿವ ಕೆ.ಎಸ್. ಈಶ್ವರಪ್ಪ ಅವರು, ಬ್ರಹ್ಮ, ವಿಷ್ಣು, ಮಹೇಶ್ವರರ ರೀತಿಯಲ್ಲಿ ಶಿವಮೊಗ್ಗ ನಗರವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ಸಂಕಷ್ಟದಿಂದ ತಡೆ ಹಿಡಿಯಲಾಗಿದ್ದ ನಗರೋತ್ಥಾನ ಯೋಜನೆಯ 125 ಕೋಟಿ ಅನುದಾನವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ. ಈ ಹಿಂದೆ ಶಿವಮೊಗ್ಗಕ್ಕೆ ಬಂದಾಗ ಪಾಲಿಕೆ ಸದಸ್ಯರು ಈ ಬಗ್ಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿ ನಗರೋತ್ಥಾನ ಯೋಜನೆಯ 125 ಕೋಟಿ ರೂ. ಬಿಡುಗಡೆ ಮಾಡುವ ಮೂಲಕ ಆದೇಶ ಪ್ರತಿಯನ್ನು ಸಹ ಕಳಿಸಿದ್ದಾರೆ. ನೆರೆ, ಬರ ಕೊರೊನಾದಂತಹ ಸಂಕಷ್ಟದ ಸಂದರ್ಭದಲ್ಲಿಯೂ ಸಹ ಮುಖ್ಯಮಂತ್ರಿಗಳು ಶಿವಮೊಗ್ಗ ನಗರದ ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಮುಂದೆ ನೋಡದೆ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ನೀಡಿದ್ದಾರೆ.ಹಾಗಾಗಿ ಮುಖ್ಯಮಂತ್ರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ ಎಂದರು.

ಇದರೊಂದಿಗೆ ಸಚಿವ ಈಶ್ವರಪ್ಪನವರು 14 ಇಲಾಖೆಗಳಿಂದ 133 ಕೋಟಿ ರೂ. ಅನುದಾನವನ್ನು ಶಿವಮೊಗ್ಗ ನಗರಕ್ಕೆ ನೀಡಿದ್ದಾರೆ. ಸಂಸದ ಬಿವೈ ರಾಘವೇಂದ್ರ ಅವರು ವಿವಿಧ 27 ಕಾಮಗಾರಿಗಳ ಜೊತೆಗೆ 27 ಸಮುದಾಯ ಭವನಗಳಿಗೆ 30 ಕೋಟಿ ಅನುಧಾನ ನೀಡಿದ್ದಾರೆ ಎಂದರು.

Last Updated : Nov 4, 2020, 7:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.