ಶಿವಮೊಗ್ಗ: ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಶಿಕಾರಿಪುರದ ತಮ್ಮ ನಿವಾಸದಲ್ಲಿ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ಪ್ರತಿ ಹಬ್ಬದಲ್ಲಿ ಸ್ವಕ್ಷೇತ್ರ ಹಾಗೂ ಮನೆಯಲ್ಲಿ ಇರುತ್ತಿರಲಿಲ್ಲ. ಈ ಭಾರಿ ಸಂಕ್ರಾಂತಿ ಹಬ್ಬಕ್ಕೆ ಮನೆಯಲ್ಲಿ ಕುಟುಂಬದ ಜೊತೆ ಇದ್ದೇನೆ. ಸಂಕ್ರಾಂತಿ ಹಬ್ಬ ಎಲ್ಲರಿಗೂ ಸುಖ, ಶಾಂತಿ, ಸಮೃದ್ದಿಯನ್ನು ನೀಡಲಿ ಎಂದರು.
18 ರಂದು ಅಮಿತ್ ಶಾ ಅವರು ಬೆಂಗಳೂರಿಗೆ ಬರಲಿದ್ದಾರೆ. ಅಂದು ಅವರ ಜೊತೆ ಚರ್ಚೆ ನಡೆಸಿ, ಮಂತ್ರಿ ಮಂಡಲ ವಿಸ್ತರಣೆ ಮಾಡಲಾಗುವುದು ಎಂದರು. ಆದಷ್ಟು ಬೇಗ ಮಂತ್ರಿ ಮಂಡಲ ವಿಸ್ತರಣೆ ಆಗಲಿದೆ. ನಂತರ ಜನವರಿ 19 ರಂದು ದಾವೋಸ್ ಭೇಟಿಗೆ ಹೋಗಬೇಕಿದೆ. ಅಲ್ಲಿ ಹೊಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿ ವಾಪಸ್ ಆಗಲಿದ್ದೇನೆ ಎಂದರು. ಮಾರ್ಚ್ 5 ರಂದು ಬಜೆಟ್ ಮಂಡನೆ ಮಾಡಲಾಗುವುದು. ಬಜೆಟ್ನಲ್ಲಿ ರೈತರಿಗೆ ಹೆಚ್ಚಿನ ಆದ್ಯತೆ ನೀಡಿಲಿದ್ದೇನೆ ಎಂದು ಭರವಸೆ ನೀಡಿದರು.
ಹರ ಜಾತ್ರೆಯ ಘಟನೆ ಬಗ್ಗೆ ಪ್ರತಿಕ್ರಿಯೆಗೆ ನಿರಾಕರಣೆ: ನಿನ್ನೆ ಹರಿಹರದ ಪಂಚಮಸಾಲಿ ಪೀಠದಲ್ಲಿ ತಮ್ಮ ರಾಜೀನಾಮೆ ನೀಡುವ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಅಲ್ಲದೇ, ಇಂದು ಮಂಗಳೂರಿನಲ್ಲಿ ಸಿಎಎ ವಿರೋಧಿಸಿ ನಡೆಯುತ್ತಿರುವ ಮುಸ್ಲಿಂರ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.