ETV Bharat / state

ತವರು ಜಿಲ್ಲೆಗೆ ಸಿಎಂ ಬಿಎಸ್​ವೈ ಭೇಟಿ: ಭರಪೂರ ಕೊಡುಗೆ, ಜನತಾ ದರ್ಶನ - ಉದ್ಘಾಟನೆ

ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಭೇಟಿ ನೀಡಿಲಿದ್ದಾರೆ. ಶಿಕಾರಿಪುರ ಸೇರಿದಂತೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ನಡೆಯಲಿರುವ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಭೂಮಿಪೂಜೆ ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಜನತಾ ದರ್ಶನ ನಡೆಸಿ ಜನತೆಯ ಕುಂದು- ಕೊರತೆಗಳನ್ನು ಆಲಿಸಲಿದ್ದಾರೆ.

CM Yediyurappa
author img

By

Published : Sep 30, 2019, 5:18 AM IST

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಇಂದು ಭೇಟಿ ನೀಡಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಭೂಮಿಪೂಜೆ ನೆರವೇರಿಸಲಿದ್ದಾರೆ.

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನಡೆಸಲಿರುವ ಸಿಎಂ ಯಡಿಯೂರಪ್ಪ

ಈ ಕುರಿತು ಸಂಸದ ಬಿ.ವೈ. ರಾಘವೇಂದ್ರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿಗಳು ತಮ್ಮ ತವರು ಕ್ಷೇತ್ರವಾದ ಶಿಕಾರಿಪುರದಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು, ಬಳಿಕ ಜನತಾ ದರ್ಶನ ನಡೆಸಿ ಕ್ಷೇತ್ರದ ಜನತೆಯ ಆಹವಾಲುಗಳನ್ನು‌ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ ಶಿಕಾರಿಪುರದಿಂದ ಹೊರಟು ಶಿವಮೊಗ್ಗದಲ್ಲಿರುವ ಹಳೆಯ ಕಾರಾಗೃಹದ ಜಾಗದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಂತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದರು.

ಸಿಮ್ಸ್​ ಮೆಡಿಕಲ್ ಕಾಲೇಜು ಆವರಣದಲ್ಲಿ ಕಟ್ಟಡಗಳ ಉಳಿಕೆ ಕಾಮಗಾರಿ ಮತ್ತು ದುರಸ್ತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ ನಿಲಯದ ಕಟ್ಟಡ, ಇಂಟರ್ನ್ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ, ಆಧುನಿಕ ಶವ ಪರೀಕ್ಷಾ ಕಟ್ಟಡಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪೊಲೀಸ್ ವಸತಿ ಗೃಹಗಳ ಉದ್ಘಾಟನೆ ಸಹ ನೆರವೇರಲಿದ್ದು, ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದ ಶಾಂತವೇರಿ ಗೋಪಾಲಗೌಡ ವೃತ್ತದಿಂದ ಎನ್.ಟಿ. ರಸ್ತೆವರೆಗಿನ ಒಳ ವರ್ತುಲ ರಸ್ತೆಯಲ್ಲಿ ಸೈಕಲ್, ಪಾದಚರಿ ಮಾರ್ಗದಲ್ಲಿ ಕೆಲವು ಸೌಲಭ್ಯಗಳಿಗೆ ಚಾಲನೆ ನೀಡಲಿದ್ದಾರೆ. ತುಂಗಾ ನದಿಯ ಉತ್ತರ ದಂಡೆಯಲ್ಲಿ ವಾಯು ವಿಹಾರ ಕಾಮಗಾರಿಗೆ ಚಾಲನೆ ಕೊಡಲಿದ್ದಾರೆ. ಕುಂಸಿಯಲ್ಲಿನ ಮೆಸ್ಕಾಂ ಉಪ ವಿಭಾಗೀಯ ನೂತನ ಕಟ್ಟಡದ ಉದ್ಘಾಟನೆ ಸೇರಿದಂತೆ ಸುಮಾರು 50 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಿಎಂ ಶಿವಮೊಗ್ಗ ಕಾರ್ಯಕ್ರಮ ಮುಗಿಸಿ ಮತ್ತೆ ಶಿಕಾರಿಪುರಕ್ಕೆ ತೆರಳಲಿದ್ದಾರೆ. ಅಕ್ಟೋಬರ್​ 1ರಂದು ಶಿವಮೊಗ್ಗ ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​ರವರ ಜೊತೆ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

Intro:ತವರು ಜಿಲ್ಲೆಯಲ್ಲಿ ಬಿಎಸ್ ವೈ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ.

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತವರು ಜಿಲ್ಲೆಯಲ್ಲಿ ಇಂದು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ನಡೆಸಲಿದ್ದಾರೆ. ಬೆಳಗ್ಗೆ ತವರು ಕ್ಷೇತ್ರ ಶಿಕಾರಿಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತ್ರ ತವರು ಕ್ಷೇತ್ರದ ಜನರ ಆಹವಾಲುಗಳನ್ನು ಜನತಾ ದರ್ಶನದಲ್ಲಿ‌ ಸ್ವೀಕರ ಮಾಡಲಿದ್ದಾರೆ. ಮಧ್ಯಾಹ್ನ ಶಿಕಾರಿಪುರದಿಂದ ಹೊರಟು ಶಿವಮೊಗ್ಗದಲ್ಲಿ ಹಳೇ ಜೈಲು ಜಾಗದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಂತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.Body: ನಂತ್ರ ಸಿಮ್ಸ್ ಮೆಡಿಕಲ್ ಕಾಲೇಜು ಆವರಣದಲ್ಲಿ ಕಟ್ಟಡಗಳ ಉಳಿಕೆ ಕಾಮಗಾರಿ ಮತ್ತು ದುರಸ್ಥಿ, ಎಸ್ಸಿ/ಎಸ್ಟಿ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣ, ಇಂಟರ್ನ್ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡದ ನಿರ್ಮಾಣ, ಆಧುನಿಕ ಶವ ಪರೀಕ್ಷಾ ಕಟ್ಟಡದ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ.Conclusion: ನಂತ್ರ ಸಿಮ್ಸ್ ಮೆಡಿಕಲ್ ಕಾಲೇಜು ಆವರಣದಲ್ಲಿ ಕಟ್ಟಡಗಳ ಉಳಿಕೆ ಕಾಮಗಾರಿ ಮತ್ತು ದುರಸ್ಥಿ, ಎಸ್ಸಿ/ಎಸ್ಟಿ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣ, ಇಂಟರ್ನ್ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡದ ನಿರ್ಮಾಣ, ಆಧುನಿಕ ಶವ ಪರೀಕ್ಷಾ ಕಟ್ಟಡದ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಪೊಲೀಸ್ ವಸತಿ ಗೃಹಗಳ ಉದ್ಘಾಟನೆ ಮಾಡಲಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದ ಶಾಂತವೇರಿ ಗೋಪಾಲಗೌಡ ವೃತ್ತದಿಂದ ಎನ್.ಟಿ.ರಸ್ತೆವರೆಗಿನ ಒಳ ವರ್ತುಲ ರಸ್ತೆಯನ್ನು ಸೈಕಲ್ ಟ್ರಾಕ್ , ಪುಟ್ ಬಾತ್ ಇತರೆ ಸೌಲಭ್ಯಗಳಿಗಾಗಿ ಚಾಲನೆ, ತುಂಗಾ ನದಿ ಉತ್ತರ ದಂಡೆಯಲ್ಲಿ ವಿವಿಧ ಮೂಲಭೂತ ಸೌಕರ್ಯಗಳೊಂದಿಗೆ ವಾಯು ವಿಹಾರ ಸ್ಥಳ ಅಭಿವೃದ್ದಿ ಕಾಮಗಾರಿಗೆ ಚಾಲನೆ, ಕುಂಸಿಯಲ್ಲಿನ ಮೆಸ್ಕಾಂ ಉಪ ವಿಭಾಗೀಯ ನೂತನ ಕಟ್ಟಡದ ಉದ್ಘಾಟನೆ ನಡೆಸಲಿದ್ದಾರೆ. ಇವೆಲ್ಲಾವು ಸೇರಿದಂತೆ ಸುಮಾರು 50 ಕೋಟಿ ರೂ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೇರವೇರಿಸಲಿದ್ದಾರೆ. ಸಿಎಂ ಶಿವಮೊಗ್ಗ ಕಾರ್ಯಕ್ರಮ ಮುಗಿಸಿ ಪುನಃ ಶಿಕಾರಿಪುರಕ್ಕೆ ತೆರಳಿದ್ದಾರೆ. ಅಕ್ಟೊಂಬರ್ 1 ರಂದು ಶಿವಮೊಗ್ಗ ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ‌ ನಳೀನ್ ಕುಮಾರ್ ಕಟೀಲ್ ರವರ ಜೊತೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿ ನಂತ್ರ ಬೆಂಗಳೂರಿಗೆ ತೆರಳಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಬೈಟ್: ಬಿ.ವೈ.ರಾಘವೇಂದ್ರ. ಸಂಸದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.