ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಇಂದು ತವರು ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಹಲವು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಶಿಕಾರಿಪುರ ತಾಲೂಕಿನ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಕಸಬಾ (ಕಲ್ಲುವಡ್ಡುಹಳ್ಳ) ಏತ ನೀರಾವರಿ ಯೋಜನೆ ಹಾಗೂ ಶಿವಶರಣೆ ಅಕ್ಕಮಹಾದೇವಿ ಜನ್ಮ ಸ್ಥಳದ ಸಮಗ್ರ ಅಭಿವೃದ್ಧಿ ಕಾಗಾರಿ ಸೇರಿದಂತೆ ಹಲವು ಕಾಮಗಾರಿಗಳಿಗೆ ಸಿಎಂ ಇಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಪಶು ಚಿಕಿತ್ಸಾಲಯ ಕಟ್ಟಡ ಸೇರಿದಂತೆ ಹಲವು ವಿದ್ಯಾರ್ಥಿನಿಲಯಗಳನ್ನು ಇಂದು ಸಿಎಂ ಉದ್ಘಾಟನೆ ಮಾಡಲಿದ್ದಾರೆ. ಇದರ ಜೊತೆ ಶಿರಾಳಕೊಪ್ಪ ಪಟ್ಟಣ ಪಂಚಾಯಿತಿಯ ಬಳ್ಳಿಗಾವಿಯಲ್ಲಿರುವ ಘನ ತ್ಯಾಜ್ಯ ನಿರ್ವಹಣೆ ಘಟಕದಲ್ಲಿ ಅಳವಡಿಸಿರುವ ಕಸ ಸಂಸ್ಕರಣ ಯಂತ್ರ ಮತ್ತು ಬೇಲಿಂಗ್ ಯಂತ್ರದ ಉದ್ಘಾಟನೆ ಮಾಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಸಚಿವ ರಮೇಶ್ ಜಾರಕಿಹೊಳಿ, ಸಚಿವ ಸಿ.ಟಿ.ರವಿ, ಸಚಿವ ಪ್ರಭು ಚೌವ್ಹಾಣ್ ಹಾಗೂ ಸಚಿವ ನಾರಾಯಣ ಗೌಡ ಇವರುಗಳು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಜಿಲ್ಲಾಧಿಕಾರಿ ಶಿವಕುಮಾರ್ ಕೆ.ಬಿ., ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎಂ. ಶಾಂತರಾಜು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ ಉಪಸ್ಥಿತರಿರುವರು.