ಶಿವಮೊಗ್ಗ : ವಿಧಾನಸಭ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 1 ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ರವರು ನಡೆಸಿದ ರೋಡ್ ಶೋ ನಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದಾರೆ ಎಂದು ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದಾರೆ. ಅಮಿತ್ ಶಾ ರವರು ರೋಡ್ ಶೋ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದಿಂದ ನೆಹರು ರಸ್ತೆಯ ಮೂಲಕ ಲಕ್ಷ್ಮೀ ಟಾಕೀಸ್ ವೃತ್ತದವರೆಗೂ ರೋಡ್ ಶೋ ನಡೆಸಲಾಯಿತು. ರೋಡ್ ಶೋನಲ್ಲಿ ಮಕ್ಕಳನ್ನು ಬಳಸಿಕೊಳ್ಳಲಾಗಿದೆ ಎಂದು ಬಾಲ ಕಾರ್ಮಿಕ ಪದ್ದತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜೆಡಿಎಸ್ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ವಿರುದ್ದ ಸಹ ದೂರು : ವಿಧಾನಸಭಾ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯವರು ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆ ಫ್ಲೆಯಿಂಗ್ ಸ್ಕ್ವಾಡ್ ತಂಡದವರು ದೂಡು ನೀಡಿದ್ದರು. ಈ ದೂರಿನ ಅನ್ವಯ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ 1986 ಅಡಿ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ : ಯಾರ ಜೊತೆಗೂ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ, ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ: ಬಿಎಸ್ವೈ
ಇದೇ ರೀತಿ ಇನ್ನೊಂದು ಪ್ರಕರಣದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಮಕ್ಕಳೊಂದಿಗೆ ಚುನಾವಣಾ ಪ್ರಚಾರ ಮಾಡುತ್ತಿರುವ ಬಗ್ಗೆ ಪ್ಲೈಯಿಂಗ್ ಸ್ಕಾಂಡ್ ತಂಡದವರು ದೂಡು ನೀಡಿದ್ದು, ಈ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ : ಗೆಲುವಿನ ವಿಶ್ವಾಸದಲ್ಲಿ ದಿನೇಶ್ ಗುಂಡೂರಾವ್: ಬಿಜೆಪಿ ಸಪ್ತಗಿರಿ ಗೌಡ, ಪಕ್ಷೇತರ ಕೃಷ್ಣಯ್ಯ ಶೆಟ್ಟಿಯಿಂದ ಪ್ರಬಲ ಪೈಪೋಟಿ!