ETV Bharat / state

ಕುಡಿಯುವ ನೀರಿನ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಸಚಿವ ಈಶ್ವರಪ್ಪ

ಬುಧವಾರ ಸಂಜೆ 5 ಗಂಟೆಗೆ ಕುಡಿಯುವ ನೀರಿನ ಮೇಲ್ವಿಚಾರಣೆ ನಡೆಸುವ ಅಧಿಕಾರಿಗಳ ಸಭೆ ಕರೆಯಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸೂಚಿಸಿದರು. ಅಲ್ಲದೆ ಜುಲೈ 8ರೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Complete drinking water project quickly: Eshwarappa
ಕುಡಿಯುವ ನೀರಿನ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ: ಈಶ್ವರಪ್ಪ ಗಡುವು
author img

By

Published : Jun 10, 2020, 2:02 AM IST

ಶಿವಮೊಗ್ಗ: ನಗರದ 35 ವಾರ್ಡ್​​ಗಳಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿಯನ್ನು ಜುಲೈ 8ರೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ.

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಕುಡಿಯುವ ನೀರಿನ ಸರಬರಾಜು ಮತ್ತು ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅವರು ಮಾತನಾಡಿ, ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಪಾಲಿಕೆ ಸದಸ್ಯ ಚನ್ನಬಸಪ್ಪ ಮಾತನಾಡಿ, ನಗರದ ಅನೇಕ ವಾರ್ಡ್‌ಗಳಲ್ಲಿ ಟ್ಯಾಂಕ್‌ಗಳಲ್ಲಿ ನೀರು ಸಂಪೂರ್ಣ ತುಂಬುತ್ತಿಲ್ಲ. ಮೊದಲು ಈ ಸಮಸ್ಯೆ ಬಗೆಹರಿದಲ್ಲಿ ಮಾತ್ರ ಎಲ್ಲಾ ವಾರ್ಡ್‌ಗಳಲ್ಲಿ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಸಾಧ್ಯ. ಕೂಡಲೇ ಈ ಬಗ್ಗೆ ಗಮನಹರಿಸಿ ಎಂದು ಸಚಿವರಿಗೆ ತಿಳಿಸಿದರು.

ಇದಕ್ಕೆ ಧ್ವನಿಗೂಡಿಸಿದ ಸದಸ್ಯ ಶಂಕರ ಗನ್ನಿ, ಅಧಿಕಾರಿಗಳ ನಡುವಿನ ಸಮನ್ವಯತೆಯ ಕೊರತೆಯಿಂದ ನೀರಿನ ಸಮಸ್ಯೆ ಉಂಟಾಗಿದೆ. ಅಧಿಕಾರಿಗಳ ನಡುವೆ ಹೊಂದಾಣಿಕೆ ಮುಖ್ಯ. ಕೋಟಿಗಟ್ಟಲೆ ಖರ್ಚು ಮಾಡಿ ಕಾಮಗಾರಿ ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು.

ಈ ಬಗ್ಗೆ ಈಶ್ವರಪ್ಪ ಮಾತನಾಡಿ, ಟ್ಯಾಂಕ್‌ಗಳಲ್ಲಿ ನೀರು ಸಂಪೂರ್ಣ ತುಂಬಬೇಕು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗೆ ವಿಚಾರಿಸಿದರಲ್ಲದೆ ಇದರಲ್ಲಿ ಯಾವುದೆ ತೊಡಕುಗಳಿದ್ದರೆ ಕೂಡಲೇ ತಿಳಿಸಬೇಕು ಹಾಗೂ ಬುಧವಾರ ಸಂಜೆ 5 ಗಂಟೆಗೆ ಕುಡಿಯುವ ನೀರಿನ ಮೇಲ್ವಿಚಾರಣೆ ನಡೆಸುವ ಅಧಿಕಾರಿಗಳ ಸಭೆ ಕರೆಯಲು ಸೂಚಿಸಿದರು.

ನಗರದಲ್ಲಿ ಯಾವ, ಯಾವ ವಾರ್ಡ್‌ಗಳಲ್ಲಿ ಯುಜಿಡಿ ಕಾಮಗಾರಿ ಪೂರ್ಣಗೊಂಡಿದೆ ಮತ್ತು ಕಾಮಗಾರಿ ಪ್ರಗತಿಯಲ್ಲಿರುವ ವಾರ್ಡ್‌ಗಳ ಸಮಗ್ರ ವಿವರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಅಲ್ಲದೆ ಯುಜಿಡಿ ಕಾಮಗಾರಿ ಮುಗಿದಿರುವ ಕಡೆಗಳಲ್ಲಿ ಆಯಾ ವಾರ್ಡ್‌ನ ಪಾಲಿಕೆ ಸದಸ್ಯರು ಕೂಡಲೇ ಮನೆಗಳಿಗೆ ಸಂಪರ್ಕ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಅಶ್ವಥನಗರ, ಎಲ್.ಬಿ.ಎಸ್. ನಗರ, ಪಿ-ಟಿ.ಕಾಲೋನಿ, ಬಸವೇಶ್ವರನಗರ, ಕೃಷಿನಗರ, ಸಹ್ಯಾದ್ರಿನಗರ, ಸಹ್ಯಾದ್ರಿ ಬಡಾವಣೆ, ಅಶೋಕ ನಗರ, ಅರವಿಂದನಗರ, ಮಂಜುನಾಥ ಬಡಾವಣೆ, ಆನಂದರಾವ್ ಬಡಾವಣೆ, ಗೋಪಾಳ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಆಲ್ಕೋಳ, ಅಮೃತ್ ಲೇಔಟ್, ಸೂರ್ಯ ಬಡಾವಣೆಯಲ್ಲಿ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ ಅಧಿಕಾರಿ ಮಾಹಿತಿ ನೀಡಿದರು.

ಸಭೆಯಲ್ಲಿ ಪಾಲಿಕೆ ಉಪಮೇಯರ್ ಸುರೇಖಾ ಮುರಳೀಧರ್, ಆಯುಕ್ತ ಚಿದಾನಂದ ವಟಾರೆ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.