ETV Bharat / state

ವಿದೇಶಗಳಿಂದ ಬಂದವರ ಮಾಹಿತಿ ಪಡೆದು ಆರೋಗ್ಯ ತಪಾಸಣೆ ನಡೆಸಿ: ಅಧಿಕಾರಿಗಳಿಗೆ ಕ್ಯಾ. ಮಣಿವಣ್ಣನ್ ಸೂಚನೆ

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾ. ಮಣಿವಣ್ಣನ್ ಅವರು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ಕ್ಯಾ.ಮಣಿವಣ್ಣನ್
ಕ್ಯಾ.ಮಣಿವಣ್ಣನ್
author img

By

Published : Mar 10, 2020, 10:58 PM IST

ಶಿವಮೊಗ್ಗ: ಕೊರೊನಾ ವೈರಸ್ ಜಿಲ್ಲೆಗೆ ಕಾಲಿಡದಂತೆ ನಿಗಾ ವಹಿಸಲು ವಿದೇಶಗಳಿಂದ ಆಗಮಿಸುವವರ ವಿವರಗಳನ್ನು ಪಡೆದು, ಅವರ ಆರೋಗ್ಯ ತಪಾಸಣೆ ನಡೆಸಿ ನಿಗಾ ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾ.ಮಣಿವಣ್ಣನ್ ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ಅವರು ಕೊರೊನಾ ಬಾಧಿತ ದೇಶಗಳಿಂದ ಆಗಮಿಸುವವರು ಸ್ವಯಂ ಪ್ರೇರಿತರಾಗಿ ಮಾಹಿತಿಯನ್ನು ಒದಗಿಸಿ ಆರೋಗ್ಯ ತಪಾಸಣೆಗೆ ಒಳಗಾಗಬೇಕು. ಸಾರ್ವಜನಿಕರು ಸಹ ವಿದೇಶಗಳಿಂದ ಆಗಮಿಸಿರುವವರ ಬಗ್ಗೆ ಮಾಹಿತಿ ಇದ್ದರೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿಯನ್ನು ಒದಗಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡಗಳನ್ನು ರಚಿಸಬೇಕು. ಈ ತಂಡಗಳು ಮಾಹಿತಿ ದೊರೆತಲ್ಲಿಗೆ ತೆರಳಿ ಆರೋಗ್ಯ ತಪಾಸಣೆ ಹಾಗೂ ಸೂಕ್ತ ನಿಗಾ ವಹಿಸಲು ಕ್ರಮ ಕೈಗೊಳ್ಳಬೇಕು ಎಂದರು.

ದೂರವಾಣಿ ಸಂಖ್ಯೆ:

ಕೊರೊನಾ ವೈರಸ್ ಕುರಿತಾದ ಯಾವುದೇ ಸಂಶಯ, ಮಾಹಿತಿಗಳನ್ನು ಟೋಲ್ ಫ್ರೀ ಸಂಖ್ಯೆ 104 ಕರೆ ಮಾಡಿ ನೀಡಬಹುದಾಗಿದೆ. ಅದೇ ರೀತಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ದೂರವಾಣಿ ಸಂಖ್ಯೆ 9448721741, ಶಿವಮೊಗ್ಗ ತಾಲೂಕು ಆರೋಗ್ಯಾಧಿಕಾರಿ 9448183379, ಭದ್ರಾವತಿ 9449448755, ತೀರ್ಥಹಳ್ಳಿ 9448681734, ಶಿಕಾರಿಪುರ 8277510530, ಸೊರಬ 9110824873, ಸಾಗರ 8722297749 ಮತ್ತು ಹೊಸನಗರ 9964462404 ಕರೆ ಮಾಡಿ ಮಾಹಿತಿಯನ್ನು ನೀಡಬಹುದಾಗಿದೆ.

ಆರ್ಥಿಕ ಗುರಿ ಸಾಧಿಸಬೇಕು:

ಎಲ್ಲಾ ಇಲಾಖೆಗಳು ಮಾರ್ಚ್ ಅಂತ್ಯದ ಒಳಗಾಗಿ ಈ ಹಣಕಾಸು ವರ್ಷದ ಆರ್ಥಿಕ ಗುರಿಯನ್ನು ಶೇಕಡಾ ನೂರರಷ್ಟು ಸಾಧಿಸಬೇಕು. ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಆರ್ಥಿಕ ಗುರಿಯನ್ನು ಸಾಧಿಸುವುದು ಆಯಾ ಇಲಾಖಾ ಮುಖ್ಯಸ್ಥರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಎಸ್‍ಎಸ್‍ಎಲ್‍ಸಿ ಫಲಿತಾಂಶ:

ಕಳೆದ ವರ್ಷ ಶಿವಮೊಗ್ಗ ಜಿಲ್ಲೆ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ 21ನೇ ಸ್ಥಾನದಲ್ಲಿತ್ತು. ಈ ವರ್ಷ ಟಾಪ್ 10ರ ಒಳಗೆ ಸ್ಥಾನ ಪಡೆಯಬೇಕು. ಜಿಲ್ಲೆಯಲ್ಲಿ 10ಕೋಟಿ ರೂ. ವೆಚ್ಚದಲ್ಲಿ 289 ಶಾಲಾ ಕೊಠಡಿಗಳ ದುರಸ್ತಿ ಕಾರ್ಯ ಪೂರ್ಣಗೊಳಿಸಲಾಗಿದೆ. ಇನ್ನುಳಿದ 529 ಶಾಲಾ ಕೊಠಡಿಗಳು ದುರಸ್ತಿಯಾಗುವ ತನಕ ಆ ಕೊಠಡಿಗಳಲ್ಲಿ ಯಾವುದೇ ಕಾರಣಕ್ಕೂ ತರಗತಿಗಳನ್ನು ನಡೆಸಬಾರದು ಎಂದರು.

ಕುಡಿಯುವ ನೀರು ಪೂರೈಕೆ:

ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಈಗಾಗಲೇ ಕುಡಿಯುವ ನೀರಿಗೆ ಮುಂದೆ ತೊಂದರೆಯಾಗಬಹುದು ಎಂದು ಗುರುತಿಸಲಾಗಿರುವ 321 ಗ್ರಾಮಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು. ಪ್ರಸ್ತುತ ಟ್ಯಾಂಕರ್ ಮೂಲಕ ಶಿವಮೊಗ್ಗ ನಗರದ 5 ವಾರ್ಡ್‍ಗಳಲ್ಲಿ ನೀರು ಒದಗಿಸಲಾಗುತ್ತಿದ್ದು, ನಗರ ಪ್ರದೇಶದಲ್ಲಿ ಸಹ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.