ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್‌ನಿಂದ ಇನ್ನೂ ಅಧಿಕೃತ ಪಟ್ಟಿ ಘೋಷಣೆಯಾಗದೇ ಇದ್ದರೂ ಸಹ ಪಕ್ಷದ ಅಧ್ಯಕ್ಷರ ಅಪ್ಪಣೆಯ ಮೇರೆಗೆ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಈ ಬಾರಿ ಬಿಜೆಪಿ ವಿರೋಧಿ ಅಲೆಯಿಂದ ನನ್ನ ಗೆಲುವು ಸಾಧ್ಯವಾಗುತ್ತದೆ. ಅಲ್ಲದೇ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶೇ. 50ಕ್ಕೂ ಹೆಚ್ಚು ಕಾಂಗ್ರೆಸ್ ಬೆಂಬಲಿಗರು ಇರುವುದರಿಂದ ನಮ್ಮ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಆರ್.ಪ್ರಸನ್ನ ಕುಮಾರ್ ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡಬೇಕಿತ್ತು. ಆದರೆ ಈ ವೇಳೆಗೆ ಕೆಲವು ದಾಖಲೆ ಪತ್ರ ಹಾಗೂ ಅಫಿಡವಿಟ್ ಇರದ ಕಾರಣ ಮಧ್ಯಾಹ್ನ 2:30ಕ್ಕೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಯ ವೇಳೆ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್ ಹಾಗೂ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಹಾಜರಿದ್ದರು.