ETV Bharat / state

ಶಿವಮೊಗ್ಗ: ಮಹಾನಗರ ಪಾಲಿಕೆ ಮುತ್ತಿಗೆ ಹಾಕಿದ ಕಾಂಗ್ರೆಸ್ ​ಪಾಲಿಕೆ ಸದಸ್ಯರು - shivamogga mayor

ಬ್ಯಾರಿಸ್ ಸಂಸ್ಥೆಯವರಿಗೆ 99 ವರ್ಷಗಳ ಕಾಲ ಶಿವಪ್ಪ ನಾಯಕ ಮಾಲ್ ಬಾಡಿಗೆ ಆಧಾರದ ಮೇಲೆ ಮುಂದುವರೆಸಲು ಅನುಮತಿ ನೀಡಿರುವುದನ್ನು ವಿರೋಧಿಸಿ ಮೇಯರ್ ಕಚೇರಿಗೆ ಮುತ್ತಿಗೆ ಹಾಕಿದ ಕಾಂಗ್ರೆಸ್​ ಪಾಲಿಕೆ ಸದಸ್ಯರು.

congress-corporation-members-laid-siege-to-mahanagar-palike
ಶಿವಮೊಗ್ಗ: ಮಹಾನಗರ ಪಾಲಿಕೆ ಮುತ್ತಿಗೆ ಹಾಕಿದ ಕಾಂಗ್ರೆಸ್ ​ಪಾಲಿಕೆ ಸದಸ್ಯರು
author img

By

Published : Dec 7, 2022, 5:27 PM IST

Updated : Dec 7, 2022, 6:57 PM IST

ಶಿವಮೊಗ್ಗ: ಶಿವಪ್ಪ ನಾಯಕ ಮಾರುಕಟ್ಟೆ ಗುತ್ತಿಗೆ ಅವಧಿಗೆ ಸಂಬಂಧಿಸಿದ ತನಿಖಾ ವರದಿ ಬಂದು 5 ತಿಂಗಳಾದರೂ ಸಭೆ ಕರೆಯದ ಮೇಯರ್ ವಿರುದ್ಧ ಕಾಂಗ್ರೆಸ್‌ ಪಕ್ಷದ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಮುಖಂಡರಿಂದ ಮಹಾನಗರ ಪಾಲಿಕೆಯ ಮೇಯರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಬ್ಯಾರಿಸ್ ಸಂಸ್ಥೆಯವರಿಗೆ 99 ವರ್ಷಗಳ ಕಾಲ ಶಿವಪ್ಪ ನಾಯಕ ಮಾಲ್ ಬಾಡಿಗೆ ಆಧಾರದ ಮೇಲೆ ಮುಂದುವರೆಸಲು ಅನುಮತಿ ನೀಡಿರುವುದನ್ನು ಖಂಡಿಸಿ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಾಲಿಕೆ ಮುಂಭಾಗದ ಗೇಟ್ ಹತ್ತಿ ಮೇಯರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಶಿವಮೊಗ್ಗ: ಮಹಾನಗರ ಪಾಲಿಕೆ ಮುತ್ತಿಗೆ ಹಾಕಿದ ಕಾಂಗ್ರೆಸ್ ​ಪಾಲಿಕೆ ಸದಸ್ಯರು

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹೆಚ್.ಎಸ್ ಸುಂದರೇಶ್, ಮಾಜಿ ಶಾಸಕರಾದ ಕೆ.ಬಿ ಪ್ರಸನ್ನ ಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ, ಪಾಲಿಕೆ ಸದಸ್ಯರಾದ ಹೆಚ್.ಸಿ ಯೋಗಿಶ್, ಯಮುನಾ ರಂಗೇಗೌಡ , ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್​ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಶಿವಮೊಗ್ಗ:ಭತ್ತದ ಕಟಾವು ಮಾಡುವಾಗ ಯಂತ್ರಕ್ಕೆ ಸಿಲುಕಿ ರೈತನ ಕೈ ಕಟ್​​

Last Updated : Dec 7, 2022, 6:57 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.