ಶಿವಮೊಗ್ಗ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರ ನೇತೃತ್ವದಲ್ಲಿ ನಗರ ಕಾಂಗ್ರೆಸ್ ಭವನದಲ್ಲಿ ನಡೆದ ಪಕ್ಷ ಸಂಘಟನಾ ಸಭೆಯಲ್ಲಿ ಜಿಲ್ಲಾ ಮುಖಂಡರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಯಮವನ್ನು ಉಲ್ಲಂಘಿಸಿದರು.
ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಸರ್ಕಾರ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಕರೆ ನೀಡಿದೆ. ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವನ್ನು ಮರೆತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಅಲ್ಲದೆ ಅನೇಕ ಕಾರ್ಯಕರ್ತರು ಮಾಸ್ಕ್ ಸಹ ಧರಿಸಿರಲಿಲ್ಲ ಎಂಬುದು ತಿಳಿದುಬಂದಿದೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಕೆ.ಬಿ ಪ್ರಸನ್ನ ಕುಮಾರ್, ಜಿಲ್ಲಾಧ್ಯಕ್ಷ ಹೆಚ್. ಎಸ್ ಸುಂದ್ರೇಶ್ ಹಾಗೂ ಪಕ್ಷದ ಮುಖಂಡರು ಭಾಗವಹಿಸಿದ್ದರು.