ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ವತಿಯಿಂದ ಆರೋಗ್ಯ ಅಭಯ ಹಸ್ತ ತರಬೇತಿ ಶಿಬಿರ ಮತ್ತು ಆರೋಗ್ಯ ಹಸ್ತ ಕಿಟ್ ವಿತರಣಾ ಕಾರ್ಯಕ್ರಮವನ್ನು ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿತ್ತು.
ಆರೋಗ್ಯ ಹಸ್ತ ಕಿಟ್ಅನ್ನು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದ್ರೇಶ್ ಆರೋಗ್ಯ ಹಸ್ತ ಕಿಟ್ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಹೆಚ್.ಎಸ್ ಸುಂದ್ರೇಶ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್ ಈಶ್ವರಪ್ಪನವರು ಕೊರೊನ ತಡೆಗಟ್ಟುವತ್ತ ಗಮನ ಹರಿಸುವುದನ್ನು ಬಿಟ್ಟು ಬೇರೆ ಬೇರೆ ವಿಷಯಗಳ ಬಗ್ಗೆ ಮಾತನಾಡಿ, ಧರ್ಮಗಳ ವಿಚಾರದಲ್ಲಿ ಪ್ರಚೋದನೆ ಮಾಡುತ್ತಿದ್ದಾರೆಯೇ ಹೊರತು ಕೊರೊನಾ ನಿಯಂತ್ರಿಸುತ್ತಿಲ್ಲ ಎಂದು ಆರೋಪಿಸಿದರು.
ಸಚಿವರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾವನ್ನು ನಿಯಂತ್ರಿಸುವತ್ತ ಗಮನ ಹರಿಸಬೇಕು, ಇಲ್ಲವೇ ರಾಜೀನಾಮೆ ನೀಡಿ ಮನೆಗೆ ಹೋಗಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಕಾಂಗ್ರೆಸ್ ಮುಖಂಡ ಮಂಜುನಾಥ್ ಭಂಡಾರಿ ಹಾಗೂ ಇತರೆ ಮುಖಂಡರು ಉಪಸ್ಥಿತರಿದ್ದರು.