ETV Bharat / state

ಶಿವಮೊಗ್ಗ: ಪುತ್ರಿ ಬಿಜೆಪಿ ಸೇರ್ಪಡೆಗೆ ಕಾಗೋಡು ತಿಮ್ಮಪ್ಪ ಅಸಮಾಧಾನ - ಈಟಿವಿ ಭಾರತ ಕನ್ನಡ

ಕಾಂಗ್ರೆಸ್​ ನಾಯಕ ಕಾಗೋಡು ತಿಮ್ಮಪ್ಪ ಅವರು ತಮ್ಮ ಪುತ್ರಿ ಡಾ. ರಾಜನಂದಿನಿ ಬಿಜೆಪಿ ಸೇರ್ಪಡೆಯಾಗಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

congress-leader-kagodu-thimpappa-upset-for-daughter-joining-bjp
ಪುತ್ರಿ ಬಿಜೆಪಿ ಸೇರ್ಪಡೆ : ಕಾಗೋಡು ತಿಮ್ಮಪ್ಪ ಅಸಮಾಧಾನ
author img

By

Published : Apr 12, 2023, 4:09 PM IST

Updated : Apr 12, 2023, 5:58 PM IST

ಪುತ್ರಿ ಡಾ. ರಾಜನಂದಿನಿ ಬಿಜೆಪಿ ಸೇರ್ಪಡೆ ಬಗ್ಗೆ ಕಾಗೋಡು ತಿಮ್ಮಪ್ಪ ಅಸಮಾಧಾನ

ಶಿವಮೊಗ್ಗ: ಪುತ್ರಿ ಡಾ.ರಾಜನಂದಿನಿ ಬಿಜೆಪಿ ಸೇರ್ಪಡೆಯಾಗಿರುವುದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ.ರಾಜನಂದಿನಿ ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಡಾ.ರಾಜನಂದಿನಿ‌ ಬಿಜೆಪಿ‌ ಸೇರ್ಪಡೆ ಆಗಿರುವ ಸುದ್ದಿ ನನಗೆ ಈಗಷ್ಟೇ ಗೊತ್ತಾಗಿದೆ. ಅವಳು ಈ ರೀತಿ ಮಾಡುತ್ತಾಳೆ ಎಂದು ನಾನು ಕನಸಿನಲ್ಲೂ ಆಲೋಚಿಸಿರಲಿಲ್ಲ ಎಂದು ಕಾಂಗ್ರೆಸ್​ನ ಹಿರಿಯ ನಾಯಕರೂ ಆಗಿರುವ ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನು ರಾಜಕಾರಣದಲ್ಲಿ ಸ್ಥಿರತೆ ಮತ್ತು ಬದ್ಧತೆ ಉಳಿಸಿಕೊಂಡು ಬಂದವನು. ನಾವು ಅದನ್ನು ಅನುಸರಿಸುತ್ತಿದ್ದೇವೆ ಕಾರ್ಯರೂಪಕ್ಕೆ ತರುತ್ತಿದ್ದೇವೆ. ಆ ಸಂತೋಷ ಮತ್ತು ನೆಮ್ಮದಿ ನನಗಿದೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಸೇರಿರುವಂತಹದ್ದು ನನ್ನ ಎದೆಗೆ ಚೂರಿ ಹಾಕಿದಂತಾಗಿದೆ ಎಂದರು. ಡಾ.ರಾಜನಂದಿನಿ ಈ ಕೆಲಸ ಮಾಡಬಾರದಿತ್ತು. ಇದು ನನ್ನ ದೌರ್ಭಾಗ್ಯ ಎಂದು ಬೇಸರ ವ್ಯಕ್ತಪಡಿಸಿದರು. ಅದೇನಿದ್ದರೂ ನಾನು ಕಾಂಗ್ರೆಸ್ ಬಿಟ್ಟು ಹೋಗಲ್ಲ. ನಾನು ಕಾಂಗ್ರೆಸ್ ಪರವಾಗಿ ನಿಲ್ಲುತ್ತೇನೆ. ಕಾಂಗ್ರೆಸ್​​ ಪರವಾಗಿಯೇ ಇರುತ್ತೇನೆ ಎಂದರು.

ಡಾ.ರಾಜನಂದಿನಿ ಬಿಜೆಪಿ ಸೇರ್ಪಡೆ ಹಿಂದೆ ಹಾಲಪ್ಪನವರ ಕೈವಾಡ ಇದೆ ಎಂದು ಆರೋಪಿಸಿದ ಅವರು, ಮಗಳನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತೇನೆ. ಅವಳ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಅವಳು ತನ್ನ ಬೇಸರವನ್ನು ನನ್ನ ಬಳಿ ಹೇಳಿಕೊಂಡಿಲ್ಲ ಎಂದರು. ನಾನು ಅವಳನ್ನು ಮಲ್ಲಿಕಾರ್ಜುನ ಖರ್ಗೆ ಬಳಿ ಕರೆದುಕೊಂಡು ಹೋಗಿದ್ದೆ. ಅವಕಾಶ ಇದ್ದರೆ ನೋಡೋಣ ಅಂದಿದ್ದರು. ರಾಜಕೀಯವಾಗಿ ಬೆಳೆಯುವಂಥದ್ದನ್ನು ಕಾಂಗ್ರೆಸ್ ನಲ್ಲೇ ಇದ್ದು ಮಾಡಬಹುದಿತ್ತು. ನನ್ನ ಹತ್ತಿರ ಅವಳು ಏನನ್ನೂ ಹೇಳಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಡಾ.ರಾಜನಂದಿನಿ ಜೊತೆ ಆನಂದಪುರಂ ಜಿಲ್ಲಾ ಪಂಚಾಯತ್​​ ಮಾಜಿ ಸದಸ್ಯ ಹುನಗೋಡು ರತ್ನಾಕರ್ ರವರು ಸಹ ಬಿಜೆಪಿ‌ ಸೇರ್ಪಡೆಯಾಗಿದ್ದಾರೆ.

ಮುಂದೆ ನಿರ್ಲಕ್ಷ್ಯ ಮಾಡಬಹುದು ಎಂಬ ಕಾರಣಕ್ಕೆ ಈ ನಿರ್ಧಾರ: ’’ಪಕ್ಷದಲ್ಲಿನ ಬೆಳವಣಿಗೆ, ಟಿಕೇಟ್ ಘೋಷಣೆಯಲ್ಲಿನ ನಿರ್ಲಕ್ಷ್ಯ, ಗೋಪಾಲಕೃಷ್ಣ ಬೇಳೂರು ಅವರು ಈಗಲೇ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಇನ್ನು ಗೆದ್ದರೆ ಮುಂದೆ ಹೇಗೆ ಎಂಬುದರ ಮೇಲೆ ಸ್ವಯಂ ಪ್ರೇರಿತರಾಗಿ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಪಕ್ಷಕ್ಕೆ‌ ದುಡಿಯೋಣ. ನಂತರ ಮುಂದೆ ಸ್ಥಾನ ಮಾನ ಕೇಳೋಣ‘‘ ಎಂದು ಬಿಜೆಪಿ ಸೇರ್ಪಡೆಯಾದ ಕಾಗೋಡು ತಿಮ್ಮಪ್ಪ ಅವರ ಮಗಳು ರಾಜನಂದಿನಿ ಅವರು ಪ್ರತಿಕ್ರಿಯಿಸಿದ್ದಾರೆ.

ತಂದೆ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಕಾಂಗ್ರೆಸ್ ನಲ್ಲಿ ಟಿಕೆಟ್ ನೀಡದೇ ಹೋದರೆ ಬಿಜೆಪಿಗೆ ಹೋಗುತ್ತೇನೆ ಎಂದು ಹೇಳಿದ್ದೆ. ನಾನು ನಮ್ಮ ತಂದೆ ಅವರ ಬಳಿಯಲ್ಲಿಯೂ ಈ ಬಗ್ಗೆ ತಿಳಿಸಿದ್ದೆ ಎಂದು ಹೇಳಿದರು. ಹುನಗೋಡು ರತ್ನಾಕರ್ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ನಮ್ಮ ನಾಯಕರಾದ ಕಾಗೋಡು ತಿಮ್ಮಪ್ಪ ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಇನ್ನು ಟಿಕೆಟ್ ಪಡೆದ ಗೋಪಾಲಕೃಷ್ಣ ಬೇಳೂರು ನಮ್ಮನ್ನು ಸಂಪರ್ಕ ಮಾಡಿಲ್ಲ. ಇದರಿಂದ ಪಕ್ಷದಿಂದ ಬೇಸತ್ತು ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಇಬ್ಬರು ಹಾಲಿ ಶಾಸಕರಿಗೆ ಟಿಕೆಟ್.. ಹುಮ್ನಾಬಾದ್​ನಲ್ಲಿ ಸಿದ್ದು ಪಾಟೀಲ್​​​ಗೆ ಮಣೆ

Last Updated : Apr 12, 2023, 5:58 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.