ಡಿ.19 ರಂದು ಎನ್ಆರ್ಸಿ ವಿರುದ್ಧ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ - ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಕಾರ್ಯಕರ್ತರು ಪ್ರತಿಭಟಣೆ
ಡಿ.19ರಂದು ಶಿವಮೊಗ್ಗದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ: ಡಿ.19ರಂದು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆ ನಡೆಸದಂತೆ ಪೊಲೀಸರು ಒತ್ತಡ ಹೇರುತ್ತಿದ್ದಾರೆ. ಇದು ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಪ್ರಯತ್ನ, ಹಾಗಾಗಿ ಎಷ್ಟೇ ಒತ್ತಡ ಬಂದರು ಸಹ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್ಎಸ್ ಸುಂದರೇಶ್ ತಿಳಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಹಮ್ಮಿಕೊಂಡಿರುವ ಮೆರವಣಿಗೆಗೆ ಪೊಲೀಸರು ಅನುಮತಿ ನೀಡಿದೆ ಮೆರವಣಿಗೆ ನಡೆಸಿದಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದರು. ಡಿ. 19 ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಹೊರಟು ಗೋಪಿ ವೃತ್ತ, ಮಹಾವೀರ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತಲುಪಲಿದೆ. ಪ್ರತಿಭಟನಾ ಮೆರವಣಿಗೆಯಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಶಾಸಕರಾದ ಸಂಗಮೇಶ್ವರ್, ಆರ್ ಪ್ರಸನ್ನ ಕುಮಾರ್ ಹಾಗೂ ಮಾಜಿ ಶಾಸಕರು ,ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಕೇಂದ್ರ ಸರ್ಕಾರ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಇತ್ತೀಚಿಗೆ ಅಂಗೀಕರಿಸಲಾದ ಪೌರತ್ವ ತಿದ್ದುಪಡಿ ಮಸೂದೆ ಸಂವಿಧಾನದ ಹಾಗೂ ದೇಶದ ಒಂದು ಸಮುದಾಯದವರ ಆಶಯದ ವಿರುದ್ಧ ವಾಗಿದೆ. ಈ ಮಸೂದೆಯು ನಮ್ಮ ದೇಶದ ನೈತಿಕ, ಆರ್ಥಿಕ, ಸಂವಿಧಾನಿಕ ಜಾತ್ಯತೀತ ಪರಂಪರೆಗಳಿಗೆ ವಿರುದ್ಧವಾಗಿದೆ. ದೇಶದ ಪೌರತ್ವ ನೀಡುವಲ್ಲಿ ಧಾರ್ಮಿಕ ನೆಲೆಯ ಆಧಾರದ ಮೇಲೆ ತಾರತಮ್ಯ ಹಾಗೂ ಸಂವಿಧಾನದ ಪರಿಚ್ಛೇದ 14 ಮತ್ತು ಅಂತರಾಷ್ಟ್ರೀಯ ಹಕ್ಕುಗಳ ಒಪ್ಪಂದಗಳು ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು. ಒಂದು ಸಮುದಾಯದವರನ್ನು ಬಲಿಪಶುಗಳನ್ನಾಗಿಸುವ ಹುನ್ನಾರ ಈ ಕಾಯ್ದೆಯ ಹಿಂದಿದೆ ರಾಜಕೀಯ ದುರುದ್ದೇಶ ಇರುವುದು ಸ್ಪಷ್ಟವಾಗಿ ಕಾಣುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಈ ಕಾಯ್ದೆ ಜಾರಿಗೆ ತರಬಾರದು ಎಂದು ಒತ್ತಾಯಿಸಿದರು.
ಡಿ.೧೯ ಎನ್ ಆರ್ ಸಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ಡಿ, 19ರಂದು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿ ನಡೆಸದಂತೆ ಒತ್ತಡವನ್ನು ಪೊಲೀಸರು ಹೇರುತ್ತಿದ್ದಾರೆ.
ಇದು ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಹಾಗಾಗಿ ಎಷ್ಟೇ ಒತ್ತಡ ತಂದರೂ ಸಹ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್ಎಸ್ ಸುಂದರೇಶ್ ತಿಳಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಹಮ್ಮಿಕೊಂಡಿರುವ ಮೆರವಣಿಗೆ ಪೊಲೀಸರು ಅನುಮತಿ ನೀಡಿದೆ ಮೆರವಣಿಗೆ ನಡೆಸಿದಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದರು.
ಡಿ. 19 ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಹೊರಟು ಗೋಪಿ ವೃತ್ತ, ಮಹಾವೀರ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತಲುಪಲಿದೆ.
ಪ್ರತಿಭಟನಾ ಮೆರವಣಿಗೆಯಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಶಾಸಕರಾದ ಸಂಗಮೇಶ್ವರ್,ಆರ್ ಪ್ರಸನ್ನ ಕುಮಾರ್, ಹಾಗೂ ಮಾಜಿ ಶಾಸಕರು ,ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಕೇಂದ್ರ ಸರ್ಕಾರ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಇತ್ತೀಚಿಗೆ ಅಂಗೀಕರಿಸಲಾದ ಪೌರತ್ವ ತಿದ್ದುಪಡಿ ಮಸೂದೆ ಸಂವಿಧಾನದ ಹಾಗೂ ದೇಶದ ಒಂದು ಸಮುದಾಯದವರ ಆಶಯದ ವಿರುದ್ಧ ವಾಗಿದೆ. ಈ ಮಸೂದೆಯು ನಮ್ಮ ದೇಶದ ನೈತಿಕ ಆರ್ಥಿಕ ಸಂವಿಧಾನಿಕ ಜಾತ್ಯತೀತ ಪರಂಪರೆಗಳಿಗೆ ವಿರುದ್ಧವಾಗಿದೆ.
ದೇಶದ ಪೌರತ್ವ ನೀಡುವಲ್ಲಿ ಧಾರ್ಮಿಕ ನೆಲೆಯ ಆಧಾರದ ಮೇಲೆ ತಾರತಮ್ಯ ಹಾಗೂ ಸಂವಿಧಾನದ ಪರಿಚ್ಛೇದ 14 ಮತ್ತು ಅಂತರಾಷ್ಟ್ರೀಯ ಹಕ್ಕುಗಳ ಮತ್ತು ಒಪ್ಪಂದಗಳು ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.
ಒಂದು ಸಮುದಾಯದವರನ್ನು ಬಲಿಪಶುಗಳನ್ನಾಗಿಸುವ ಹುನ್ನಾರ ಈ ಕಾಯ್ದೆ ಹಿಂದಿದೆ ರಾಜಕೀಯ ದುರುದ್ದೇಶ ಇರುವುದು ಸ್ಪಷ್ಟವಾಗಿ ಕಾಣುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಈ ಕಾಯ್ದೆ ಜಾರಿಗೆ ತರಬಾರದು ಎಂದು ಒತ್ತಾಯಿಸಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗ
Body:ಭೀಮಾನಾಯ್ಕ ಎಸ್ ಶಿವಮೊಗ್ಗ
Conclusion: