ETV Bharat / state

ಶಿವಮೊಗ್ಗ ಉಸ್ತುವಾರಿ ಸಚಿವ ನಾರಾಯಣ ಗೌಡ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ.. ಮುತ್ತಿಗೆಗೆ ಯತ್ನ - congress protest against minister narayana gowda

ಮಳೆ ಹಾನಿ ವೀಕ್ಷಿಸಲು ಬಂದ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ವಿರುದ್ಧ ಕಾಂಗ್ರೆಸ್ ಮಹಾನಗರ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ನಡೆದಿದೆ.

congress-protesting-against-the-the-minister-narayana-gowda-in-shivamogga
ಶಿವಮೊಗ್ಗ: ಉಸ್ತುವಾರಿ ಸಚಿವ ನಾರಾಯಣ ಗೌಡ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ಮುತ್ತಿಗೆಗೆ ಯತ್ನ
author img

By

Published : May 23, 2022, 3:38 PM IST

ಶಿವಮೊಗ್ಗ: ಮಳೆ ಹಾನಿ ವೀಕ್ಷಿಸಲು ಬಂದ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ವಿರುದ್ಧ ಕಾಂಗ್ರೆಸ್ ಮಹಾನಗರ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ನಡೆದಿದೆ. ನಗರದ ಚಿಕ್ಕಲ್ ನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ವೇಳೆ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಶಿವಮೊಗ್ಗ ಉಸ್ತುವಾರಿ ಸಚಿವ ನಾರಾಯಣ ಗೌಡ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ನೈಜ ಸಮಸ್ಯೆ ಅರಿಯದೇ ಕಾಟಾಚಾರಕ್ಕೆ ಬಂದಿದ್ದೀರಾ ಎಂದು ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ‌ ಚಕಮಕಿ ನಡೆದಿದೆ. ಬಳಿಕ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಸಚಿವರೊಂದಿಗೆ ಸಂಸದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್ ಉಪಸ್ಥಿತರಿದ್ದರು.

ಓದಿ : ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣ : ಸಾಫ್ಟ್‌ವೇರ್ ಸಿದ್ಧಪಡಿಸಿದ್ದು 17 ವರ್ಷದ ಬಾಲಕ?

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.