ಶಿವಮೊಗ್ಗ: ಎಲ್ಕೆಜಿಯಿಂದಲೇ ಮಕ್ಕಳಿಗೆ ಆನ್ಲೈನ್ ಶಿಕ್ಷಣವನ್ನು ನೀಡಬೇಕೆಂದು ತಜ್ಞರ ಸಮಿತಿ ಸರ್ಕಾರಕ್ಕೆ ನೀಡಿರುವ ಶಿಫಾರಸನ್ನು ಒಪ್ಪದಂತೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಲಾಯಿತು.
ಇದರಿಂದ ಅನೇಕ ಬಡ ಕುಟುಂಬಗಳಿಗೆ ತೊಂದರೆಯಾಗುತ್ತದೆ. ಜೀವನ ನಡೆಸುವುದೇ ಕಷ್ಟವಿರುವಾಗ ಮೊಬೈಲ್ಗಳನ್ನು ಎಲ್ಲಿಂದ ಕೊಂಡುಕೊಳ್ಳಬೇಕು ಎಂದು ಪ್ರಶ್ನಿಸಿದ ಅವರು, ಅನೇಕ ಗ್ರಾಮೀಣ ಭಾಗದಲ್ಲಿ ಸರಿಯಾಗಿ ನೆಟ್ವರ್ಕ್ ಸಿಗಲ್ಲ. ಹೀಗಿರುವಾಗ ಆನ್ಲೈನ್ ಶಿಕ್ಷಣ ಜಾರಿಗೆ ತರುವುದು ಸೂಕ್ತವಲ್ಲ. ಇದನ್ನು ನಿಲ್ಲಿಸದಿದ್ದರೆ ಶಿಕ್ಷಣ ಸಚಿವರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.