ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ವತಿಯಿಂದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಬಿಜೆಪಿ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ರೈತರನ್ನು ಬೀದಿಪಾಲು ಮಾಡಲು ಹೊರಟಿದೆ. ರಿಯಲ್ ಎಸ್ಟೇಟ್ ನಡೆಸುವವರಿಗೆ ಹಾಗೂ ಬಂಡಾವಾಳಶಾಹಿಗಳಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದು ಕಿಡಿಕಾರಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ತಮ್ಮ ಮನವಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಎಂಎಲ್ಸಿ ಆರ್.ಪ್ರಸನ್ನ ಕುಮಾರ್ ಸೇರಿದಂತೆ ಜಿಪಂ ಸದಸ್ಯರು ಹಾಗೂ ತಾಪಂ ಸದಸ್ಯರು ಸೇರಿದಂತೆ ಹಲವರು ಭಾಗಿಯಾಗಿದ್ದರು.