ಶಿವಮೊಗ್ಗ: ನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಞೆಯನ್ನು ಮಾರ್ಚ್ 4ರವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಅವಧಿಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.
ನಾಳೆಯಿಂದ ಶಾಲಾ-ಕಾಲೇಜುಗಳು ಸಹ ಪುನಾರಂಭಗೊಳ್ಳುತ್ತಿವೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಶಿವಮೊಗ್ಗ ನಗರದಲ್ಲಿ ಮುಂದುವರೆಸಲಾಗಿದೆ.
ನಗರದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ನಂತರ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.
ಇದನ್ನೂ ಓದಿ: ನೀವು ಶರಿಯತ್ ಕಾನೂನು ಒಪ್ಪುವುದಾದರೆ, ಹರ್ಷನ ಕೊಂದವರನ್ನು ಹೊಡೆದು ಸಾಯಿಸಿ: ಶಾಸಕ ರಘುಪತಿ ಭಟ್