ETV Bharat / state

ಹೊರ ಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರಿಂದ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ...

ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಮುಂತಾದ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Shimoga
ಹೊರ ಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರ ಪ್ರತಿಭಟನೆ
author img

By

Published : Oct 3, 2020, 5:29 PM IST

ಶಿವಮೊಗ್ಗ: ಆರೋಗ್ಯ ಇಲಾಖೆ ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಮುಂತಾದ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರು ಜಿಲ್ಲಾ ಆರೋಗ್ಯಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು.

ಕೊರೊನಾ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್‌ಗಳಾಗಿ ಸೇವೆ ಸಲ್ಲಿಸಿದ ಆರೋಗ್ಯ ಇಲಾಖೆ ವೈದ್ಯಕೀಯ ಶಿಕ್ಷಣ ಇಲಾಖೆಯ ಹಾಗೂ ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಸೇವೆ ಸಲ್ಲಿಸಿದ್ದಾರೆ. ಆದರೆ ಸರ್ಕಾರ ಮಾತ್ರ ಅವರ ಸಮಸ್ಯೆ ಬಗೆಹರಿಸದೆ ಮೌನ ವಹಿಸಿದೆ. ಹಾಗಾಗಿ ಸರ್ಕಾರ ಕೂಡಲೇ ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಸೇವಾ ಭದ್ರತೆ ಆರೋಗ್ಯ ಮತ್ತು ಜೀವ ವಿಮೆ, ಹೆಚ್.ಆರ್ ಪಾಲಿಸಿ ಸೇರಿದಂತೆ ಒಟ್ಟು 14 ಬೇಡಿಕೆಗಳನ್ನು ಈಡೇರಿಸಬೇಕು ಹಾಗೂ ಹೊರ ಗುತ್ತಿಗೆ ರದ್ದುಪಡಿಸಿ ಒಳ ಗುತ್ತಿಗೆ ಆಧಾರದಲ್ಲಿ ನೀಯೋಜಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಕೊರೊನಾ ಸಂದರ್ಭದಲ್ಲಿ ಮೃತಪಟ್ಟ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಕುಟುಂಬಗಳಿಗೆ 50 ಲಕ್ಷ ಪರಿಹಾರ ಮತ್ತು ಅನುಕಂಪದ ಆಧಾರದಲ್ಲಿ ಮೃತಪಟ್ಟ ಕುಟುಂಬಗಳ ಸದಸ್ಯರಿಗೆ ಸರ್ಕಾರಿ ನೌಕರಿಯನ್ನು ನ್ಯಾಯಸಮ್ಮತವಾಗಿ ನೀಡಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.