ಶಿವಮೊಗ್ಗ: ನಗರ ಪ್ರದೇಶಗಳಲ್ಲಿ ಮಾಸ್ಕ್ ಧರಿಸದವರಿಗೆ 1000 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲು ರಾಜ್ಯ ಸರ್ಕಾರ ಸೂಚಿಸಿದ್ದು, ಪೊಲೀಸರು ಹಾಗೂ ಪಾಲಿಕೆ ಸಿಬ್ಬಂದಿ ಈಗಗಲೇ ಕಾರ್ಯಾಚರಣೆಗೆ ಇಳಿದಿದ್ದಾರೆ.
ನಗರ ಪ್ರದೇಶದಲ್ಲಿ ಮಾಸ್ಕ್ ಹಾಕದವರಿಗೆ 1 ಸಾವಿರ ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ನಿಗಧಿಪಡಿಸಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಈ ಹಿನ್ನೆಲೆ ನಗರದಲ್ಲಿ ಪೊಲೀಸರು ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿ ಮಾಸ್ಕ್ ಧರಿಸದಿರುವ ಸಾರ್ವಜನಿಕರಿಗೆ ದಂಡ ವಿಧಿಸಲಾರಂಭಿಸಿದ್ದಾರೆ. ನಗರದ ವಿವಿಧ ಸರ್ಕಲ್ಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ಮಾಸ್ಕ್ ಧರಿಸದವರನ್ನು ನಿಲ್ಲಿಸಿ ದಂಡ ವಿಧಿಸಲಾಗುತ್ತಿದೆ.