ಶಿವಮೊಗ್ಗ ಜಿಲ್ಲೆಯಲ್ಲಿ 112 ಜನರಲ್ಲಿ ಕೊರೊನಾ ದೃಢ - Covid-19 latest news
ಜಿಲ್ಲೆಯಲ್ಲಿ 956 ಸಕ್ರಿಯ ಪ್ರಕರಣಗಳದ್ದು, ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 248, ಕೋವಿಡ್ ಕೇರ್ ಸೆಂಟರ್ನಲ್ಲಿ 493 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 53, ಮನೆಯಲ್ಲಿ 80 ಜನ ಐಸೋಲೇಷನ್‌ನಲ್ಲಿದ್ದಾರೆ.

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 112 ಜನರಲ್ಲಿ ಕೊರೊನಾ ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,094 ಕ್ಕೆ ಏರಿಕೆಯಾಗಿದೆ.
ಇಂದು 32 ಜನ ಗುಣಮುಖರಾಗಿ ಮನೆಗೆ ಸೇರಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 1,095 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು 3 ಜನ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೂ 43 ಜನ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ 956 ಸಕ್ರಿಯ ಪ್ರಕರಣಗಳದ್ದು, ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 248, ಕೋವಿಡ್ ಕೇರ್ ಸೆಂಟರ್ನಲ್ಲಿ 493 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 53, ಮನೆಯಲ್ಲಿ 80 ಜನ ಐಸೋಲೇಷನ್‌ನಲ್ಲಿದ್ದಾರೆ.
ಇಂದು ಜಿಲ್ಲೆಯಲ್ಲಿ 395 ಕಂಟೇನ್ಮೆಂಟ್ ಝೋನ್ಗಳನ್ನು ಗುರುತಿಸಲಾಗಿದೆ. ಶಿವಮೊಗ್ಗ-61, ಭದ್ರಾವತಿ-23, ಶಿಕಾರಿಪುರ-13, ಸಾಗರ-06, ಸೊರಬ-05, ಹೊಸನಗರ-04 ಜನರ ಕೋವಿಡ್ ವರದಿ ಪಾಸಿಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 862 ಜನರನ್ನು ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 595 ಜನರ ಫಲಿತಾಂಶ ಬಂದಿದೆ.