ಶಿವಮೊಗ್ಗ: ದೊಡ್ಡಪೇಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ಗೆ ಕೊರೊನಾ ದೃಢಪಟ್ಟಿದೆ. ಶಿವಮೊಗ್ಗದ 40 ವರ್ಷದ ಹೆಡ್ ಕಾನ್ಸ್ಟೇಬಲ್ರನ್ನು ಸದ್ಯ ಮೆಗ್ಗಾನ್ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇವರು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಟೇನ್ಮೆಂಟ್ ಝೋನ್ನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕಳೆದ ಮೂರು ದಿನದ ಹಿಂದೆ ಇದೇ ಪೊಲೀಸ್ ಠಾಣೆಯ ಎಎಸ್ಐ ಒಬ್ಬರಿಗೆ ಕೊರೊನಾ ಕಾಣಿಸಿಕೊಂಡಿತ್ತು.