ETV Bharat / state

ದಿನನಿತ್ಯದ ಅಗತ್ಯ ವಸ್ತುಗಳನ್ನು ಮನೆಗಳಿಗೆ ತಲುಪಿಸಲು ಶಿವಮೊಗ್ಗ ಡಿಸಿ ಚಿಂತನೆ

ಪ್ರತಿ ವಾರ್ಡ್‍ನಲ್ಲಿ ತರಕಾರಿ ಮಾರಾಟ ಮಾಡಲು ಹಾಗೂ ಪ್ಯಾಕೆಟ್​​ನಲ್ಲಿ ಆಹಾರವನ್ನು ಮನೆ ಬಾಗಿಲಿಗೆ ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

DC thinking of delivering essential items at home
ಶಿವಮೊಗ್ಗ ಡಿಸಿ ಹೇಳಿಕೆ
author img

By

Published : Mar 25, 2020, 11:01 PM IST

ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಪ್‍ಕಾಮ್ಸ್ ನೆರವಿನಿಂದ ಪ್ರತಿ ವಾರ್ಡ್‍ನಲ್ಲಿ ತರಕಾರಿ ಮಾರಾಟ ಮಾಡಲು ಹಾಗೂ ಪ್ಯಾಕೆಟ್​​ನಲ್ಲಿ ಆಹಾರವನ್ನು ಮನೆ ಬಾಗಿಲಿಗೆ ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಡಿಸಿ

ಈಗಾಗಲೇ ತರಕಾರಿ, ಹಾಲು, ಹಣ್ಣು, ಮೀನು, ಮಾಂಸ, ದಿನಸಿ ವಸ್ತುಗಳಂತಹ ಅವಶ್ಯಕ ವಸ್ತುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಕ್ಕಿಜ್ವರ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೆ ಮಾತ್ರ ಚಿಕನ್ ಮಾರಾಟ ನಿರ್ಬಂಧಿಸಲಾಗಿದೆ. ಶುಕ್ರವಾರದ ಒಳಗಾಗಿ ಹಾಪ್‍ಕಾಮ್ಸ್ ವತಿಯಿಂದ ವಾಹನದ ಮೂಲಕ ಪ್ರತಿ ವಾರ್ಡ್‍ನಲ್ಲಿ ನಿಗದಿತ ದರದಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು. ಜನತಾ ಕರ್ಫ್ಯೂಗೆ ಜನ ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇದೇ ರೀತಿ ತಮ್ಮ ಸಹಕಾರ ಬೇಕು ಎಂದು ವಿನಂತಿಸಿಕೊಂಡಿದ್ದಾರೆ.

ಮನೆ ಮನೆಗೆ ಆಹಾರ ಪೂರೈಕೆ:

ಹೋಟೆಲ್‍ಗಳನ್ನು ಅವಲಂಬಿಸಿರುವವರನ್ನು ಗಮನದಲ್ಲಿರಿಸಿ ಮನೆ ಬಾಗಿಲಿಗೆ ಸಿದ್ಧ ಆಹಾರ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಐದು ವಾರ್ಡ್‍ಗಳಿಗೆ ಒಬ್ಬರಂತೆ ಗುತ್ತಿಗೆದಾರರನ್ನು ಗುರುತಿಸಿ, ಆಯಾ ವಾರ್ಡ್‍ಗಳಲ್ಲಿ ಬೇಡಿಕೆ ಅನುಸರಿಸಿ ಆಹಾರ ಒದಗಿಸಲು ವ್ಯವಸ್ಥೆ ಮಾಡಲಾಗುವುದು.

ಕೆಲವು ಸೀಮಿತ ಮೆನು ಸಿದ್ಧಪಡಿಸಿ ದರ ನಿಗದಿಪಡಿಸಬೇಕು. ಆಹಾರ ವಿತರಿಸುವವರಿಗೆ ಗುರುತಿನ ಚೀಟಿ ನೀಡಲಾಗುವುದು. ಆಹಾರದ ಗುಣಮಟ್ಟವನ್ನು ಮಹಾನಗರ ಪಾಲಿಕೆ ಖಾತ್ರಿಪಡಿಸಬೇಕು. ಇತರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಹ ಅಗತ್ಯವಿದ್ದರೆ ಈ ವ್ಯವಸ್ಥೆ ಮಾಡಬಹುದಾಗಿದೆ ಎಂದರು.

ಆಸ್ಪತ್ರೆಗಳ ಹತ್ತಿರ ಇರುವ ಹೋಟೆಲ್‍ಗಳನ್ನು ತೆರೆದಿಟ್ಟು, ಆಹಾರ ತಿನಿಸುಗಳನ್ನು ಪಾರ್ಸಲ್ ಕೊಂಡೊಯ್ಯಲು ಅವಕಾಶ ನೀಡಲಾಗುವುದು. ಕುವೆಂಪು ರಸ್ತೆಯಲ್ಲಿರುವ ಇಂತಹ ಹೋಟೆಲ್‍ಗಳನ್ನು ತೆರೆಯಲು ಸೂಚನೆ ನೀಡಿದರು.

ಜಿಲ್ಲಾಡಳಿತ ಅನುಮತಿ ಅಗತ್ಯ:

ಅಗತ್ಯವಿರುವವರಿಗೆ ಆಹಾರ ಸಾಮಾಗ್ರಿ, ಅವಶ್ಯಕ ವಸ್ತುಗಳನ್ನು ವಿತರಿಸಲು ಬಯಸುವ ಸರ್ಕಾರೇತರ ಸಂಸ್ಥೆಗಳು ಹಾಗೂ ಸಂಘ ಸಂಸ್ಥೆಗಳು ಈ ಕುರಿತು ಜಿಲ್ಲಾಡಳಿತದಿಂದ ಅನುಮತಿ ಪಡೆಯಬೇಕು. ಅಂತವರಿಗೆ ಗುರುತಿನ ಚೀಟಿ ಒದಗಿಸಲಾಗುವುದು. ಸಾಮಾಗ್ರಿಗಳನ್ನು ವಿತರಣೆ ಮಾಡುವವರು ಮಾಸ್ಕ್, ಹ್ಯಾಂಡ್​ ಗ್ಲೌಸ್​​​ ಸೇರಿದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದರು.

ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಬೆಂಗಳೂರಿನಿಂದ ಬಂದವರಿಗೆ ಮನೆಯೊಳಗೆ ಸ್ವಯಂ ಬಂಧನ(ಹೋಂ ಕ್ವಾರಂಟೈನ್)ದಲ್ಲಿರುವಂತೆ ಸೂಚನೆ ನೀಡಬೇಕು. ಅವರ ಮೇಲೆ ನಿಗಾ ಇರಿಸಿ, ನಿರಂತರವಾಗಿ ಅವರನ್ನ ತಪಾಸಣೆ ನಡೆಸಬೇಕು. ಈ ಕುರಿತು ಎಲ್ಲಾ ಪಿಡಿಒಗಳು ನಿಗದಿತ ನಮೂನೆಯಲ್ಲಿ ವರದಿಯನ್ನು ಸಲ್ಲಿಸಬೇಕು. ಸ್ವಯಂ ಬಂಧನ ಇಡೀ ಕುಟುಂಬಕ್ಕೆ ಅನ್ವಯವಾಗಲಿದ್ದು, ಆ ಮನೆಯ ಸದಸ್ಯರು ಹೊರಗೆ ಬಂದರೆ ನೆರೆಹೊರೆಯವರು ಮಾಹಿತಿ ಒದಗಿಸಲು ಸೂಚಿಸುವಂತೆ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.