ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು 160 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 14.164 ಕ್ಕೆ ಏರಿಕೆಯಾಗಿದೆ. ಇಂದು 246 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 12.108 ಜನ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿಂದು 05 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 277 ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1839 ಜನ ಚಿಕಿತ್ಸೆಯಲ್ಲಿದ್ದಾರೆ.
ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 126 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್ನಲ್ಲಿ 123 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 296 ಜನ ಇದ್ದಾರೆ. ಮನೆಯಲ್ಲಿ 1206 ಜನ ಐಸೋಲೇಷನ್ ನಲ್ಲಿದ್ದಾರೆ. ಆರ್ಯುವೇದ ಕಾಲೇಜಿನಲ್ಲಿ 88 ಜನ ಇದ್ದಾರೆ. ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್ ಸಂಖ್ಯೆ 6276 ಏರಿಕೆ ಹಾಗಿದೆ. ಇದರಲ್ಲಿ 3181 ಜೋನ್ ವಿಸ್ತರಣೆಯಾಗಿದೆ.
ತಾಲೂಕುವಾರು ಸೊಂಕಿತರ ಸಂಖ್ಯೆ
ಶಿವಮೊಗ್ಗ-67.
ಭದ್ರಾವತಿ-22.
ಶಿಕಾರಿಪುರ-11.
ತೀರ್ಥಹಳ್ಳಿ-07.
ಸೊರಬ-27.
ಸಾಗರ-13.
ಹೊಸನಗರ-08.
ಬೇರೆ ಜಿಲ್ಲೆಯಿಂದ 05 ಜನ ಸೊಂಕಿತರು ಆಗಮಿಸಿದ್ದಾರೆ. ಇಂದು ಜಿಲ್ಲೆಯಲ್ಲಿ 2038 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 1551 ಜನರ ವರದಿ ಬಂದಿದೆ.