ETV Bharat / state

ಶಿವಮೊಗ್ಗದಲ್ಲಿ ಮತ್ತೆ ಐವರಿಗೆ ಕೊರೊನಾ:ಸೊಂಕಿತರ ಸಂಖ್ಯೆ 116 ಕ್ಕೆ ಏರಿಕೆ - ಶಿವಮೊಗ್ಗದಲ್ಲಿ ಕೊರೊನಾ ಪ್ರಕರಣ

ಮಲೆನಾಡಿನ ಮಡಿಲು ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಐವರಿಗೆ ಕೊರೊನಾ ಸೋಂಕು ವಕ್ಕರಿಸಿದೆ.

dsd
ಶಿವಮೊಗ್ಗದಲ್ಲಿ ಮತ್ತೆ ಐವರಿಗೆ ಕೊರೊನಾ
author img

By

Published : Jun 23, 2020, 9:15 PM IST

ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು 5 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಒಟ್ಟು‌ ಸೋಂಕಿತರ ಸಂಖ್ಯೆ 116ಕ್ಕೆ ಏರಿಕೆಯಾಗಿದೆ.

35 ವರ್ಷದ ಮಹಿಳೆಗೆ ಮಹಾರಾಷ್ಟ್ರ ಸಂಪರ್ಕದಿಂದ ಸೋಂಕು ತಗುಲಿದೆ. ಎಂಪಿಎಂ ಬಡಾವಣೆಯ 6 ಕ್ರಾಸ್​ನಲ್ಲಿ ಸೋಂಕಿತೆಯ ಮನೆ ಇರುವ ಕಾರಣ ಸೀಲ್​ಡೌನ್ ಮಾಡಲಾಗಿದೆ. ಮಹಿಳೆಯ ಜೊತೆಗಿದ್ದ ಮಗ ಹಾಗೂ ಕುಟುಂಬಸ್ಥರನ್ನು ಕ್ವಾರಂಟೈನ್ ಮಾಡಲಾಗಿದೆ.

ಸೋಂಕಿತ ಕೆಎಸ್‌ಆರ್‌ಪಿ ಪೊಲೀಸ್ ಪ್ರಾಥಮಿಕ ಸಂಪರ್ಕ ಹೊಂದಿದ್ದ ಪೊಲೀಸ್​ಗೂ ಕೊರೊನಾ ಪಾಸಿಟಿವ್ ಬಂದಿದೆ. ಸೊರಬ ಹಾಗೂ ಹೊಸನಗರದ ತಲಾ ಒಬ್ಬರಿಗೆ ಮಹಾಮಾರಿ ವಕ್ಕರಿಸಿದೆ. ಒಟ್ಟು 88 ಸೋಂಕಿತರು ಬಿಡುಗಡೆಯಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ 27 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.