ಶಿವಮೊಗ್ಗ: ವ್ಯಕ್ತಿಯೋರ್ವನಿಗೆ ಕೊರೊನಾ ಸೋಂಕು ತಗುಲಿದ್ದು, ಈ ಹಿನ್ನೆಲೆಯಲ್ಲಿ ನಗರದ ಚನ್ನಪ್ಪ ಲೇಔಟ್ ಅನ್ನು ಸೀಲ್ ಡೌನ್ ಮಾಡಲಾಗಿದೆ.
ನಗರದ ಚನ್ನಪ್ಪ ಲೇಔಟ್ ನ ಎರಡನೇ ಕ್ರಾಸ್ ನಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾಗಾಗಿ ಬಡಾವಣೆಯ ಮೂರು ಕಡೆಗಳಲ್ಲಿ ಬ್ಯಾರಿಕೇಟ್ ಗಳನ್ನು ಹಾಕಿ ಸೀಲ್ ಡೌನ್ ಮಾಡಲಾಗಿದ್ದು, ಜನರು ಮನೆಯಿಂದ ಹೊರ ಬಾರದಂತೆ ಆರೋಗ್ಯ ಇಲಾಖೆಯು ಸೂಚಿಸಿದೆ.
ಮನೆ ಖಾಲಿ ಮಾಡುತ್ತಿರುವ ಅಲ್ಲಿನ ನಿವಾಸಿಗಳು:
ಲೇಔಟ್ ನ ವ್ಯಕ್ತಿಗೆ ಸೋಂಕು ತಗುಲಿದ್ದು, ಇದರಿಂದ ಭಯ ಗೊಂಡಿರುವ ಅಕ್ಕ ಪಕ್ಕದ ನಿವಾಸಿಗಳು ಮನೆ ಖಾಲಿ ಮಾಡಿಕೊಂಡು ಹೋಗುತ್ತಿದ್ದಾರೆ ಎನ್ನಲಾಗುತ್ತಿದೆ.
ಸೋಂಕಿತನ ಮನೆಯ ಬಳಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೊಡಿದ್ದಾರೆ.