ಶಿವಮೊಗ್ಗ : ಮಲೆನಾಡಿನಲ್ಲೂ ಕೊರೊನಾ ಆರ್ಭಟ ಮುಂದುವರೆದಿದ್ದು, ತಾಲ್ಲೂಕು ಕಚೇರಿಯ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಹಸೀಲ್ದಾರ್ ಕಚೇರಿಯನ್ನು ಸೀಲ್ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗಿದೆ.
ಮೂರು ದಿನಗಳ ಕಾಲ ಕಚೇರಿಗೆ ಸಾರ್ವಜನಿಕರ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಕಚೇರಿಯಲ್ಲಿ ಅಧಿಕಾರಿಗಳು ಮಾತ್ರ ಕಾರ್ಯ ನಿರ್ವಹಿಸಲಿದ್ದಾರೆ. ಮುಂದಿನ ಮೂರು ದಿನವೂ ಕಚೇರಿಯನ್ನು ಸ್ಯಾನಿಟೈಜ್ ಮಾಡಲಾಗುವುದು ಎಂದು ತಹಸೀಲ್ದಾರ್ ನಾಗರಾಜ್ ತಿಳಿಸಿದರು.