ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸಾಗರ ಪಟ್ಟಣದ ಅಣಲೆಕೊಪ್ಪ ಬಡಾವಣೆಯ ನಿವಾಸಿಗಳಾದ ಹರೀಶ್ ಹಾಗೂ ಅವರ ಪತ್ನಿ ಪಟ್ಟಣದ ಬಸವನಹೊಳೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ದಂಪತಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.