ETV Bharat / state

ನಿರೀಕ್ಷೆಗೂ ಮೀರಿ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ, ಆದರೂ ಕೆಲಸ ಮಾಡ್ತಿದ್ದೇವೆ: ಸಚಿವ ಈಶ್ವರಪ್ಪ

ಕೊರೊನಾ ನಿರ್ವಹಣೆಗೆ ಜಿಲ್ಲಾಡಳಿತದ ವತಿಯಿಂದ ಗರಿಷ್ಠ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ 776 ಬೆಡ್, ಖಾಸಗಿ ಆಸ್ಪತ್ರೆಗಳಲ್ಲಿ 999 ಬೆಡ್‍ಗಳನ್ನು ಕಾಯ್ದಿರಿಸಲಾಗಿದೆ ಎಂದರು.

ಸಚಿವ ಈಶ್ವರಪ್ಪ
ಸಚಿವ ಈಶ್ವರಪ್ಪ
author img

By

Published : May 13, 2021, 6:59 PM IST

ಶಿವಮೊಗ್ಗ: ಜಿಲ್ಲೆಯಲ್ಲಿ‌ ನಿರೀಕ್ಷೆಗೂ ಮೀರಿ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಆದರೂ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿರ್ವಹಣೆಗೆ ಜಿಲ್ಲಾಡಳಿತದಿಂದ ಗರಿಷ್ಠ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ 776 ಬೆಡ್, ಖಾಸಗಿ ಆಸ್ಪತ್ರೆಗಳಲ್ಲಿ 999 ಬೆಡ್‍ಗಳನ್ನು ಕಾಯ್ದಿರಿಸಲಾಗಿದೆ. ಇದರಲ್ಲಿ 216 ಐಸಿಯು ಬೆಡ್ ಹಾಗೂ 944 ಆಕ್ಸಿಜನ್ ಬೆಡ್‍ಗಳಿವೆ. ಸರ್ಕಾರಿ ಆಸ್ಪತ್ರೆಯಲ್ಲಿ 78 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 32 ವೆಂಟಿಲೇಟರ್​ಗಳಿವೆ. ಪ್ರಸ್ತುತ ಶಿವಮೊಗ್ಗ, ಶಿಕಾರಿಪುರ, ಸಾಗರದಲ್ಲಿ ಕೋವಿಡ್ ಕೇರ್ ಸೆಂಟರ್​ಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ

ಜಿಲ್ಲೆಯಲ್ಲಿ ಇದುವರೆಗೆ 2,67,060 ಡೋಸ್ ಕೋವಿಶೀಲ್ಡ್ ನೀಡಲಾಗಿದ್ದು, 2,540 ಡೋಸ್ ಉಳಿಕೆ ಇದೆ. ಕೋವಾಕ್ಸಿನ್ 20,460 ಡೋಸ್ ನೀಡಲಾಗಿದ್ದು, ಉಳಿಕೆ ಇರುವುದಿಲ್ಲ. 2,41,578 ಮಂದಿಗೆ ಮೊದಲ ಡೋಸ್ ನೀಡಲಾಗಿದ್ದು, 54,358 ಮಂದಿಗೆ ಎರಡನೇ ಡೋಸ್ ಪೂರ್ಣಗೊಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 552 ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 383 ರೆಮ್ಡೆಸಿವಿರ್​ ಇಂಜೆಕ್ಷನ್ ಲಭ್ಯವಿದೆ. 88 ಸಕ್ರಿಯ ಕಂಟೇನ್‍ಮೆಂಟ್ ಝೋನ್‍ಗಳಿವೆ. ಮಾಸ್ಕ್ ಧರಿಸದ 9,207 ಪ್ರಕರಣಗಳಲ್ಲಿ 12,76,850 ರೂ. ದಂಡ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಆಕ್ಸಿಜನ್ ಲಭ್ಯತೆ:
ಸರ್ಕಾರಿ ಆಸ್ಪತ್ರೆಯಲ್ಲಿ 19 KL, ಖಾಸಗಿ ಆಸ್ಪತ್ರೆಯಲ್ಲಿ 32 KL ಒಟ್ಟು 51 KL ಲಭ್ಯತೆ ಇದೆ.

ಸಿಲಿಂಡರ್ ಲಭ್ಯತೆ:
ಡೂರಾ - 42, ಜಂಬೂ ಸಿಲಿಂಡರ್ - 582 ಲಭ್ಯತೆ ಇದೆ.

ರೆಮ್ಡೆಸಿವಿರ್​ ಇಂಜೆಕ್ಷನ್:
ಸರ್ಕಾರಿ‌ ಆಸ್ಪತ್ರೆಯಲ್ಲಿ -552, ಖಾಸಗಿಯಲ್ಲಿ -383 ಒಟ್ಟು 935 ಇದೆ ಎಂದರು.

ಉದ್ಯೋಗ ಖಾತರಿ ಯೋಜನೆ ಅನುಷ್ಠಾನ ಪುನಾರಂಭ:
ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಉದ್ಯೋಗ ಖಾತ್ರಿ ಯೋಜನೆಯನ್ನು ಪುನಾರಂಭಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾಗಿರುವುದನ್ನು ಮನಗಂಡು ಸರ್ಕಾರ ನರೇಗಾ ಯೋಜನೆ ಪುನಾರಂಭಿಸಲು ನಿರ್ಧರಿಸಿದೆ. ಸರ್ಕಾರ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನ ಕುರಿತಾಗಿ ಹೊಸ ಮಾರ್ಗಸೂಚಿ ಹೊರಡಿಸಿದೆ. ಇದರ ಪ್ರಕಾರ ಒಂದು ಸ್ಥಳದಲ್ಲಿ ಗರಿಷ್ಠ 40ಕೂಲಿ ಕಾರ್ಮಿಕರನ್ನು ಬಳಸಿಕೊಂಡು ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಲಾಗಿದೆ. ಕೂಲಿ ಕಾರ್ಮಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲು ತಿಳಿಸಲಾಗಿದೆ. ಕೂಲಿ ಮೊತ್ತವನ್ನು ಹೆಚ್ಚಿಸಲಾಗಿದ್ದು ಒಟ್ಟು 299 ರೂ. ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.