ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್ ಹೆಚ್ಚಳದಿಂದ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುಲಸಚಿವ ಪ್ರೊ. ಪಿ. ಕಣ್ಣನ್ ತಿಳಿಸಿದ್ದಾರೆ.
ಸರ್ಕಾರ ಕೋವಿಡ್ ತಡೆಯುವ ಹಿನ್ನೆಲೆ ಏಪ್ರಿಲ್ 21 ರಿಂದ ಮೇ 4 ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದರಿಂದಾಗಿ ಏಪ್ರಿಲ್ 21 ರಿಂದ ಮೇ 03 ರವರೆಗೆ ನಿಗದಿಯಾಗಿದ್ದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕುವೆಂಪು ವಿವಿ ವ್ಯಾಪ್ತಿಯ ಕಾಲೇಜುಗಳು ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ ನಿಗದಿಯಾಗಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು, ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ. ಮೇ 4ರ ನಂತರ ಸರ್ಕಾರದ ನಿರ್ದೇಶನದ ಮೇರೆಗೆ ಮುಂದಿನ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.