ETV Bharat / state

ಶಿವಮೊಗ್ಗ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಭೀಕರ ಕೊಲೆ - etv bharat kannada

ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.

a-man-brutally-murdered-in-shivamogga
ಶಿವಮೊಗ್ಗ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಭೀಕರ ಕೊಲೆ
author img

By ETV Bharat Karnataka Team

Published : Aug 27, 2023, 3:50 PM IST

ಶಿವಮೊಗ್ಗ: ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ನಿನ್ನೆ(ಶನಿವಾರ) ತಡರಾತ್ರಿ ನಗರದ ಟಿಪ್ಪುನಗರ ಬಡಾವಣೆಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯ ಗುರುತು ಮತ್ತು ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಲ್ಲಿ ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಯುವಕರಿಂದ ಮೂವರ ಮೇಲೆ ಹಲ್ಲೆ: ಯುವಕರ ಗುಂಪಿಗೆ ಇಲ್ಲಿ ಗಲಾಟೆ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ್ದಕ್ಕೆ 15 ಜನ ಯುವಕರ ಗುಂಪು ಮೂವರ ಮೇಲೆ ಹಲ್ಲೆ ಮಾಡಿರುವ ಘಟನೆ ನಗರದ ಗೋಪಾಳದ ಕೊರಮರಕೇರಿಯಲ್ಲಿ ನಡೆದಿದೆ. ಯುವಕರ ಗುಂಪು ಯಾರನ್ನೋ ಹುಡುಕುತ್ತ ಗಲಾಟೆ ಮಾಡಲು ಶುರು ಮಾಡಿತ್ತು. ಈ ವೇಳೆ ತಿಮ್ಮಪ್ಪ ಎನ್ನುವವರು ಇಲ್ಲಿ ಗಲಾಟೆ ಮಾಡಬೇಡಿ ಹೋಗಿ ಎಂದು ಯುವಕರಿಗೆ ಬುದ್ಧಿ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವಕರು ತಿಮ್ಮಪ್ಪ ಅವರ ತಲೆಗೆ ದೊಣ್ಣೆಯಿಂದ ಥಳಿಸಿದ್ದಾರೆ. ಈ ವೇಳೆ ಜಗಳ ಬಿಡಿಸಲು ಬಂದ ತಿಮ್ಮಪ್ಪ ಅವರ ಪುತ್ರ ದರ್ಶನ್ ಹಾಗೂ ಮನು ಎಂಬುವವರ ಮೇಲೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

Three attacked by youths
ಇಲ್ಲಿ ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಯುವಕರಿಂದ ಮೂವರ ಮೇಲೆ ಹಲ್ಲೆ

ವಿಷಯ ತಿಳಿದ ತುಂಗಾ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಉದ್ವಿಗ್ನತೆಯನ್ನು ತಿಳಿಗೊಳಿಸಲು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿ, ಆರೋಪಿಗಳ ಪತ್ತೆಗೆ ಶೋಧಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Honor Killing: ಪ್ರಿಯಕರನೊಂದಿಗೆ ಮೊಬೈಲ್​ನಲ್ಲಿ ಮಾತನಾಡುತ್ತಿದ್ದ ಯುವತಿ.. ಕುಟುಂಬಸ್ಥರಿಂದ ಮರ್ಯಾದಾ ಹತ್ಯೆ

ವ್ಯಕ್ತಿಯ ಬರ್ಬರ ಹತ್ಯೆ: ಇತ್ತೀಚಿಗೆ, ರಿಯಲ್​ ಎಸ್ಟೇಟ್​ ಹಾಗೂ ರಾಜಕೀಯದಲ್ಲಿ ಸಕ್ರಿಯವಾಗಿ ಕಾಣಿಸಿಕೊಳ್ಳುತ್ತಿದ್ದ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೈರಗಾನಹಳ್ಳಿ ಗ್ರಾಮದ ಸಮೀಪ ನಡೆದಿತ್ತು. ಬೈರಗಾನಗಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬವರು ಕೊಲೆಯಾದ ವ್ಯಕ್ತಿ. ರಾಜಕೀಯದಲ್ಲಿ ಗುರುತಿಸಿಕೊಂಡಿದ್ದ ನಾರಾಯಣಸ್ವಾಮಿ ದಲಿತ ಸಂಘಟನೆಯ ಮುಖಂಡರಾಗಿದ್ದರು.

ಕಳೆದ ಗುರುವಾರ ಸಂಜೆ ಶಿಡ್ಲಘಟ್ಟ ನಗರದಿಂದ ಸ್ವಗ್ರಾಮಕ್ಕೆ ನಾರಾಯಣಸ್ವಾಮಿ ಚಲಿಸುತ್ತಿದ್ದ ಓಮಿನಿ ರಸ್ತೆ ಬದಿ ನಿಂತಿತ್ತು. ಕಾರು ನಿಲ್ಲಿಸಿದ ಸ್ಥಳದಿಂದ ಸ್ವಲ್ಪ ದೂರದಲ್ಲಿ ನಾರಾಯಣಸ್ವಾಮಿಯ ಕೊಲೆಯಾಗಿತ್ತು. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್​ಪಿ ಡಿ.ಎಲ್. ನಾಗೇಶ್ ಹಾಗೂ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಕೊಲೆ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿತ್ತು. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ನಾರಾಯಣಸ್ವಾಮಿ ಅವರನ್ನು ಸಂಚು ರೂಪಿಸಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.